Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ವಯೋಮಿತಿ ಸಡಿಲಿಕೆ

---Advertisement---

ಬೆಂಗಳೂರು: ಎಲ್ಲಾ ನೇಮಕಾತಿಗಳಲ್ಲೂ ವಯೋಮಿತಿ ಸಡಿಲಿಕೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಉದ್ಯೋಗಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ವಯೋಮಿತಿ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರವಷ್ಟೇ ಧಾರವಾಡದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹಿಸಿದ್ದರು. ಯಾಕಂದ್ರೆ ಸರ್ಕಾರಿ ಉದ್ಯೋಗ ಪಡೆಯಬೇಕು ಅಂತ ಕಾಯುತ್ತಿರುವವರ ಸಂಖ್ಯೆ ಸಾಕಷ್ಟಿದೆ. ಅದಕ್ಕಾಗಿ ಹಗಲು ರಾತ್ರಿಯೆನ್ನದೆ ಓದುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಹಲವು ವರ್ಷಗಳಿಂದ ನೇಮಕ ಮಾಡದೆ ಸತಾಯಿಸುತ್ತಿದೆ. ಇದರಿಂದ ಸಹಜವಾಗಿಯೇ ನಮ್ಮ ವಯಸ್ಸು ಹೆಚ್ಚಾಗುತ್ತಿದೆ. ವಯಸ್ಸು ಹೆಚ್ಚಾದರೆ ಮುಂದೆ ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸರ್ಕಾರದ ಉದ್ಯೋಗ ಸಂಬಂಧ ನಡೆಸುವ ಎಲ್ಲಾ ಪರೀಕ್ಷೆಗಳ ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹ ಮಾಡಿದ್ದರು. ಇದೀಗ ವಿದ್ಯಾರ್ಥಿಗಳ ಹೋರಾಟಕ್ಕೆ ಫಲ ಸಿಕ್ಕಂತೆ ಆಗಿದೆ. ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ/ಎಸ್ಟಿ, ಪ್ರವರ್ಗ -1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ಇದೆ. ಇದರ ಮೇಲೆ ಒಂದು ಬಾರಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.  ಡಿಸೆಂಬರ್‌ 31, 2027 ರವರೆಗೆ ನಡೆಯುವ ನೇಮಕಾತಿಗಳಿಗೆ ಈ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಈ ಮೂಲಕ ಸರ್ಕಾರಿ ಕೆಲಸಕ್ಕಾಗಿ ಬಹಳಷ್ಟು ವರ್ಷಗಳಿಂದ ಕಾಯುತ್ತಿರುವವರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...