ಬೆಂಗಳೂರು.ಆಗಸ್ಟ್.15 : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಿಹಿಸುದ್ದಿಯೊಂದು ನೀಡಿದ್ದು, ಉದ್ಯೋಗ ನಿಧಿ ಎಂಬ ಹೊಸ ಯೋಜನೆಯನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದ ಅತ್ಯಂತ ಹಿಂದುಳಿದ ಹತ್ತು ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ ಸರ್ಕಾರ ಪ್ರೋತ್ಸಾಹ ನೀಡಲಿದೆ.
ಪ್ರತಿ ಹೊಸ ಉದ್ಯೋಗಕ್ಕೆ ಪ್ರತಿ ತಿಂಗಳು ಸರ್ಕಾರವೇ ತಲಾ 2500ರೂ ಪ್ರೋತ್ಸಾಹ ಧನ ನೀಡಲಿದೆ.ಈ ಸೌಲಭ್ಯ ಮುಂದಿನ ಎರಡು ವರ್ಷಗಳ ಕಾಲ ಜಾರಿಯಲ್ಲಿರುತ್ತದೆ.- ಇದರಿಂದ ಒಂದು ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದ್ದಾರೆ.
ಕೃಷಿಗೆ ತಂತ್ರಜ್ಞಾನದ ನೆರವು – “ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ” (Karnataka Digital Agritech Mission) ರೈತರ ಅನುಭವಕ್ಕೆ ಆಧುನಿಕ ತಂತ್ರಜ್ಞಾನದ ಶಕ್ತಿಯನ್ನು ಬೆರೆಸಲು “ಮುಖ್ಯಮಂತ್ರಿ ರೈತ ಚೈತನ್ಯ” ಯೋಜನೆಯನ್ನು ಘೋಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಡ್ರೋನ್ ಮತ್ತು ಉಪಗ್ರಹ ಚಿತ್ರಗಳ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುವುದು. ನೈಜ ಸಮಯದ ಮಾಹಿತಿಯ ಆಧಾರದ ಮೇಲೆ ರೈತರಿಗೆ ಬೆಳೆ, ಕೀಟ ಮತ್ತು ರೋಗದ ಬಾಧೆ ಹಾಗೂ ಮಾರುಕಟ್ಟೆಯ ಬಗ್ಗೆ ನಿಖರ ಮಾಹಿತಿ ನೀಡಲಾಗುವುದು. ಈ ಮಾಹಿತಿಯನ್ನು ಕೃಷಿ ಮಾರುಕಟ್ಟೆಯ ಡಿಜಿಟಲ್ ವ್ಯವಸ್ಥೆಯೊಂದಿಗೆ ಜೋಡಿಸಲಾಗುವುದು ಎಂದು ತಿಳಿಸಿದ್ದಾರೆ.







