Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರವನ್ನ ಬಡಿದೆಬ್ಬಿಸಿದ್ದಕ್ಕೆ ನೇಮಕಾತಿ ಆಗ್ತಿರೋದು ಎಷ್ಟು..?

---Advertisement---

ಬೆಂಗಳೂರು: ಬಹಳ ವರ್ಷಗಳಿಂದ ಶ್ರಮವಹಿಸಿ, ಕಷ್ಟ ಪಟ್ಟು ಓದುತ್ತಿರುವ ಉದ್ಯೋಕಾಂಕ್ಷಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನೇಮಕಾತಿಗೆ ಇರುವ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ನೇಮಕಾತಿಗೆ ತೀರ್ಮಾನಿಸಿದೆ.

ಕರ್ನಾಟಕದ ವಿವಿಧ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಫಲ ಸಿಕ್ಕಂತೆ ಆಗಿದೆ. ಹಲವು ಸವಾಲುಗಳ ನಡುವೆ ರಾಜ್ಯ ಸರ್ಕಾರ,‌ ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ವಿವಿಧ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ನೇಮಕಕ್ಕೆ ತೀರ್ಮಾನ ಮಾಡಲಾಗಿದೆ.

ನೇಮಕಾತಿಗಾಗಿ ತಾತ್ಕಲಿಕ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.15% ಎಸ್ಸಿ ಮೀಸಲಾತಿಗೆ ಒಳಮೀಸಲು ನೀಡಿ ನೇಮಕಾತಿಗೆ ತೀರ್ಮಾನಿಸಿದೆ. ಆದ್ರೆ, ಎಸ್‌ಸಿ ಒಳಮೀಸಲಾತಿ 17% ಇಟ್ಟು ತಕ್ಷಣ ನೇಮಕಾತಿ ಅಸಾಧ್ಯ. 17% ಎಸ್ಸಿ ಮೀಸಲಾತಿ ಜಾರಿಗೆ ಕಾನೂನು ಹೋರಾಟಕ್ಕೆ ಸರ್ಕಾರ ಮುಂದಾಗಬೇಕು. ರಾಜ್ಯಪಾಲರು ಒಳ ಮೀಸಲಾತಿ ಮಸೂದೆಗೆ ಒಪ್ಪಿಗೆ ಕೊಟ್ಟಿದ್ದರೂ ಕಾನೂನು ಸಂಘರ್ಷ ಮುಂದುವರಿಸಬೇಕಿದೆ. ಹೀಗಾಗಿ ಹಳೇ ಸೂತ್ರದ ಅನ್ವಯ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಒಟ್ಟು 56 ಸಾವಿರ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಲು ಸರ್ಕಾರ ಮುಂದಾಗಿರುವುದು ಆಕಾಂಕ್ಷಿಗಳಿಗೆ ಕೊಂಚ ಸಮಾಧಾನಕರವಾಗಿದೆ. ಹೋರಾಟ ಮಾಡಿದ್ದರ ಗೆಲುವು ಸಿಕ್ಕಂತೆ ಆಗಿದೆ. ಸರ್ಕಾರದಿಂದ ಯಾವಾಗಿನಿಂದ ಅನೌನ್ಸ್ ಮಾಡ್ತಾರೆ ಎಂದು ಕಾಯ್ತಾ ಇದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...