ಬೆಂಗಳೂರಿನ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಖಾಲಿ ಇರುವಂತ 65 ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ. ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್, ಕ್ಲೀನರ್ ಸೇರಿದಂತೆ ಒಟ್ಟು 65 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅಕ್ಟೋಬರ್ 20 ಕೊನೆಯ ದಿನಾಂಕವಾಗಿದೆ. ಪ್ರಮುಖವಾದ ಸೂಚನೆ ಎಂದರೆ, ಬೆಂಗಳೂರು ಗ್ರಾಮ ಪಂಚಾಯತ್ನಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಬಿಲ್ ಕಲೆಕ್ಟರ್- 3, ಡೇಟಾ ಎಂಟ್ರಿ ಆಪರೇಟರ್- 3, ಪರಿಚಾರಕ- 10, ಕ್ಲೀನರ್- 49 ಹುದ್ದೆ ಖಾಲಿ ಇದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 10 ನೇ, 12 ನೇ ತರಗತಿ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು.
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ, 3 ವರ್ಷಗಳು, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಇನ್ನು ಸಾಮಾನ್ಯ ಅಭ್ಯರ್ಥಿಗಳು 300 ರೂ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 200 ರೂ, ಪ.ಜಾ, ಪ.ಪಂ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. bangalorerural.nic.in ಈ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.