ಇತ್ತೀಚೆಗೆ ಮಾವು ಬೆಳೆಗಾರರಿಗೆ ಸಂಕಷ್ಟ ಎದುರಾಗಿತ್ತು. ಬೆಳೆದ ಮಾವೆಲ್ಲಾ ಬೀದಿ ಬದಿಗೆ ಬಿಸಾಡುವಂತ ಪರಿಸ್ಥಿತಿ ಬಂದೊದಗಿತ್ತು. ಇದರಿಂದ ರೈತರು ಕಂಗಲಾಗಿದ್ದರು. ಆದರೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ರೈತರಿಗೆ ಗುಡ್ ನ್ಯೂಸ್ ಒಂದು ಒದಗಿ ಬಂದಿದೆ. ಕೇಂದ್ರದಿಂದ ಮಾವು ಬೆಳೆಗೆ ಬೆಂಬಲ ಬೆಲೆ ಸಿಗುವ ಸೂಚನೆ ಸಿಕ್ಕಿದೆ.
ಕುಮಾರಸ್ವಾಮಿ ಅವರು ಬರೆದ ಒಂದೇ ಒಂದು ಪತ್ರದಿಂದ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಸಿಕ್ಕಿದೆ. ಮಾವು ಬೆಲೆ ಕುಸಿತದಿಂದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಮಾವು ಬೆಳೆಗಾರರು ಕಂಗಲಾಗಿದ್ದು, ನೆರವಿಗೆ ಬರಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಕುಮಾರಸ್ವಾಮಿ ಅವರು ಪತ್ರವೊಂದನ್ನ ಬರೆದಿದ್ದರು. ಇದಕ್ಕೆ ಕೇಂದ್ರ ಕೃಷಿ ಸಚಿವರು ಕೂಡ ಸ್ಪಂದಿಸಿದ್ದಾರೆ.
ಸದ್ಯಕ್ಕೆ ಪ್ರತಿ ಕ್ವಿಂಟಾಲ್ ಗೆ 1,616 ಪರಿಹಾರ ಧನ ಸಿಗಲಿದೆ. ರಾಜ್ಯದಲ್ಲಿ 2,50,000 ಮೆಟ್ರಿಕ್ ಟನ್ ಗಳ ಮಾವಿಗೆ ಪರಿಹಾರ ಧನ ಸಿಗಲಿದೆ. ಇದು ಮಾವು ಬೆಳೆಗಾರರಿಗೆ ಖುಷಿ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು.
ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶ್ರೀ @ChouhanShivraj ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಶ್ರೀ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















