Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದಿಂದ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್ ಗೆ ₹437.50 ರಂತೆ ನೇರ ಸಹಾಯಧನ!

---Advertisement---

ಬೆಂಗಳೂರು.ಜೂನ್.29: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಫ್ತು ಕುಸಿತದಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ತೋತಾಪುರಿ ಮಾವು ಬೆಳೆಗಾರರ ಬೆನ್ನಿಗೆ ಕರ್ನಾಟಕ ಸರ್ಕಾರ ನಿಂತಿದೆ. ಬೆಳೆಗಾರರ ನೆರವಿಗಾಗಿ ಸರ್ಕಾರವು ಒಟ್ಟು 58.54 ಕೋಟಿ ರೂಪಾಯಿಗಳ ಬೃಹತ್ ಆರ್ಥಿಕ ಪ್ಯಾಕೇಜ್ ಮಂಜೂರು ಮಾಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿಗಳು, ನಮ್ಮ ಸರ್ಕಾರ ಯಾವಾಗಲೂ ರೈತರ ಹಿತರಕ್ಷಣೆಗೆ ಬದ್ಧವಾಗಿದೆ. ರಫ್ತು ಮಾರುಕಟ್ಟೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ತಕ್ಷಣವೇ ಆರ್ಥಿಕ ನೆರವು ತಲುಪಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರವೇ ಮೊದಲು ಸಂಪೂರ್ಣ ಹಣವನ್ನು ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಈ ಯೋಜನೆಯಡಿ ಅರ್ಹ ತೋತಾಪುರಿ ಮಾವು ಬೆಳೆಗಾರರಿಗೆ ಪ್ರತಿ ಕ್ವಿಂಟಾಲ್ಗೆ ₹437.50 ರಂತೆ ನೇರ ಸಹಾಯಧನವನ್ನು ನೀಡಲಾಗುತ್ತದೆ. ಮಧ್ಯವರ್ತಿಗಳ ಹಾವಳಿ ಇಲ್ಲದೆ ಈ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ.

ಈ ಸಂಪೂರ್ಣ ಸಹಾಯಧನ ವಿತರಣಾ ಪ್ರಕ್ರಿಯೆಯನ್ನು ಮುಂದಿನ 30 ದಿನಗಳ ಒಳಗಾಗಿ ಪೂರ್ಣಗೊಳಿಸಿ, ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಸರ್ಕಾರದ ಈ ದಿಟ್ಟ ನಿರ್ಧಾರದಿಂದಾಗಿ ರಾಜ್ಯದ ಸಾವಿರಾರು ಮಾವು ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ.

Join WhatsApp

Join Now

Join Telegram

Join Now