Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಭಾಗದ ಜನರಿಗೆ ಸಿಹಿ ಸುದ್ದಿ: ಇನ್ಮುಂದೆ ಮನೆಯಲ್ಲೇ ಕುಳಿತು ಪಡೆಯಿರಿ ‘ಇ-ಸ್ವತ್ತು’ ಪ್ರಮಾಣಪತ್ರ!

---Advertisement---

ಸುದ್ದಿಒನ್,ಬೆಂಗಳೂರು,ಮೇ.12: ಗ್ರಾಮೀಣ ಭಾಗದ ನಾಗರಿಕರು ತಮ್ಮ ಆಸ್ತಿ ದಾಖಲೆಗಳಿಗಾಗಿ ಪಂಚಾಯತ್ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯಾದ್ಯಂತ ‘ಇ-ಸ್ವತ್ತು ಅಭಿಯಾನ’ಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಸಾರ್ವಜನಿಕರು ಆನ್ಲೈನ್ ಮೂಲಕವೇ ತಮ್ಮ ಆಸ್ತಿ ಪ್ರಮಾಣಪತ್ರಗಳನ್ನು ಸುಲಭವಾಗಿ ಪಡೆಯಬಹುದಾಗಿದೆ.

ಈ ಯೋಜನೆಯಡಿ ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯ ಪ್ರಕ್ರಿಯೆ ಪೂರ್ಣಗೊಂಡ ನಂತರ, ಡಿಜಿಟಲ್ ಸಹಿ ಇರುವ ಅಧಿಕೃತ ಪ್ರಮಾಣಪತ್ರವನ್ನು ಆನ್ಲೈನ್ ಮೂಲಕವೇ ಡೌನ್ಲೋಡ್ ಮಾಡಿಕೊಳ್ಳಬಹುದು. ಇದು ಸಮಯ ಉಳಿತಾಯದ ಜೊತೆಗೆ ಪಾರದರ್ಶಕತೆಯನ್ನು ಹೆಚ್ಚಿಸಲಿದೆ.

ಒಂದು ವೇಳೆ ನಿಮಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ, ನಿಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲೂ ಈ ಸೇವೆ ಲಭ್ಯವಿದೆ.

ಈ ಅಭಿಯಾನದ ಪ್ರಮುಖ ಆಕರ್ಷಣೆಯೆಂದರೆ, ಸಾರ್ವಜನಿಕರು ಯಾವುದೇ ಶುಲ್ಕವಿಲ್ಲದೆ ನಮೂನೆ 11ಎ (Form 11A) ಮತ್ತು ನಮೂನೆ 11ಬಿ (Form 11B) ದಾಖಲೆಗಳನ್ನು ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಇ-ಸ್ವತ್ತು ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಗೊಂದಲಗಳಿದ್ದರೆ ಅಥವಾ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ, ತಕ್ಷಣ ಪರಿಹಾರ ಕಂಡುಕೊಳ್ಳಲು ಇಲಾಖೆಯ ಅಧಿಕೃತ ಸಹಾಯವಾಣಿ ಸಂಖ್ಯೆ 94834 76000 ಗೆ ಕರೆ ಮಾಡಬಹುದಾಗಿದೆ.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...