Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದಿಂದ ಅಂಗವೀಕಲರಿಗೆ ಸಿಹಿಸುದ್ದಿ : ವಿವಿಧ 14 ಯೋಜನೆಗಳಿಗೆ ಅರ್ಜಿ ಆಹ್ವಾನ

---Advertisement---

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಒಟ್ಟು 14 ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು  ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅಥವಾ ನೇರವಾಗಿ ಸೇವಾಸಿಂಧು ಪೋರ್ಟಲ್ (https://sevaone.karnataka.gov.in) ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.

ಲಭ್ಯವಿರುವ 14 ಯೋಜನೆಗಳ ವಿವರ

ಆಧಾರ ಯೋಜನೆ, ಸಾಧನೆ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ತ್ರಿಚಕ್ರ ವಾಹನ, ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಹೊಲಿಗೆ ಯಂತ್ರ, ಬ್ರೆöÊಲ್ ಕಿಟ್, ಟಾಕಿಂಗ್ ಲ್ಯಾಪ್‌ಟಾಪ್

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅರ್ಜಿಯ ಒಂದು ಜೆರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಶಾಂತಿದಾಮ ಆವರಣ, ಕಂಟೋನ್ಮೆಟ್, ಬಳ್ಳಾರಿ ಇಲ್ಲಿಗೆ ಸಲ್ಲಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಬಳ್ಳಾರಿ / ಕಂಪ್ಲಿ: 8880875620, ಸಿರುಗುಪ್ಪ: 9743509698, ಸಂಡೂರು: 9632052270, ಕುರುಗೋಡು: 9538000887.

ಜೊತೆಗೆ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ V.R.W ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿನ ಯು.ಆರ್.ಡಬ್ಲೂö್ಯ ಗಳನ್ನು ಸಂಪರ್ಕಿಸಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 08392-267886 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now