Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಷನ್ ಫಲಾನುಭವಿಗಳಿಗೆ ಗುಡ್ ನ್ಯೂಸ್: ಆಗಸ್ಟ್‌ನಿಂದ ಈ ಹೊಸ ವ್ಯವಸ್ಥೆ

---Advertisement---

ಎಲ್ನಿನೋ ಪರಿಣಾಮದಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಕೊರತೆಯ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪಡಿತರ ಚೀಟಿದಾರರಿಗೆ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ರೇಷನ್ ಅಕ್ಕಿಯನ್ನು ಒಂದೇ ಬಾರಿ ವಿತರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರದ ನಿರ್ದೇಶನದಂತೆ, 2026ರ ಆಗಸ್ಟ್ 1ರಿಂದಲೇ ಮೂರು ತಿಂಗಳ ಪಡಿತರ ವಿತರಣೆಗೆ ಚಾಲನೆ ಸಿಗಲಿದೆ. ಮಳೆಗಾಲದಲ್ಲಿ ರಸ್ತೆ ಸಂಪರ್ಕ, ಸಾರಿಗೆ ಹಾಗೂ ದಾಸ್ತಾನು ಸಮಸ್ಯೆಗಳು ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಇದರ ಮೂಲಕ ಫಲಾನುಭವಿಗಳಿಗೆ ನಿರಂತರವಾಗಿ ಆಹಾರ ಧಾನ್ಯ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ.
ಸಾಮಾನ್ಯವಾಗಿ ಪ್ರತಿ ತಿಂಗಳ 1ರಿಂದ 15ನೇ ತಾರೀಖಿನವರೆಗೆ ಮಾತ್ರ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯುತ್ತಿತ್ತು. ಆದರೆ ಈ ಬಾರಿ ಮೂರು ತಿಂಗಳ ಪಡಿತರವನ್ನು ಒಂದೇ ಅವಧಿಯಲ್ಲಿ ನೀಡಲಾಗುತ್ತಿರುವುದರಿಂದ, ಆಗಸ್ಟ್ ತಿಂಗಳ ಪೂರ್ತಿ 31 ದಿನಗಳ ಕಾಲ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲಿವೆ.

ಮೂರು ತಿಂಗಳ ಪಡಿತರ ಪಡೆಯುವ ವೇಳೆ ಫಲಾನುಭವಿಗಳು ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಮೂರು ಬಾರಿ ಹೆಬ್ಬೆರಳಿನ ಗುರುತು ನೀಡುವುದು ಕಡ್ಡಾಯವಾಗಿದೆ. ಅಗತ್ಯ ಪ್ರಮಾಣದ ಅಕ್ಕಿಯನ್ನು ಎಂಎಲ್‌ಎಸ್ (MLS) ಗೋದಾಮುಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಹಂತ ಹಂತವಾಗಿ ಸಾಗಿಸಲಾಗುತ್ತದೆ. ಸಣ್ಣ ಅಂಗಡಿಗಳಿಗೆ ಒಂದೇ ಬಾರಿ ಹಾಗೂ ದೊಡ್ಡ ಅಂಗಡಿಗಳಿಗೆ ದಾಸ್ತಾನು ಸಾಮರ್ಥ್ಯಕ್ಕೆ ಅನುಗುಣವಾಗಿ ಎರಡು ಅಥವಾ ಮೂರು ಕಂತುಗಳಲ್ಲಿ ಪೂರೈಕೆ ಮಾಡಲಾಗುತ್ತದೆ. ಇದೇ ಮಾದರಿಯಲ್ಲಿ ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಪಡಿತರವನ್ನೂ ಸರ್ಕಾರ ಒಂದೇ ಅವಧಿಯಲ್ಲಿ ವಿತರಿಸಿತ್ತು. ಇದೀಗ ಮತ್ತೊಮ್ಮೆ ಇದೇ ವ್ಯವಸ್ಥೆಯನ್ನು ಮುಂದುವರಿಸಲಾಗಿದ್ದು, ಲಕ್ಷಾಂತರ ಪಡಿತರ ಚೀಟಿದಾರರಿಗೆ ಇದರಿಂದ ಅನುಕೂಲವಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now