Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

---Advertisement---

ಬೆಂಗಳೂರು. ಸೆಪ್ಟೆಂಬರ್ 23 :ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2026-27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳಡಿ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ (https://sevasindhuservices.karnataka.gov.in) ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಗಳ ವಿವರ

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಒಟ್ಟು ರೂ. 1 ಲಕ್ಷ ಘಟಕ ವೆಚ್ಚ ನಿಗದಿಪಡಿಸಲಾಗಿದ್ದು, ಇದರಲ್ಲಿ ರೂ. 50,000 ಸಹಾಯಧನ ಹಾಗೂ ರೂ. 50,000 ಸಾಲದ ಮೊತ್ತ ಒಳಗೊಂಡಿರುತ್ತದೆ.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆ

ಹೈನುಗಾರಿಕೆ: ಘಟಕ ವೆಚ್ಚದ ಶೇ. 70ರಷ್ಟು ಅಥವಾ ಗರಿಷ್ಠ ರೂ. 1.25 ಲಕ್ಷ ಸಹಾಯಧನ ಮತ್ತು ಉಳಿದ ಮೊತ್ತ ಬ್ಯಾಂಕ್ ಸಾಲ.

ವ್ಯಾಪಾರ ಮತ್ತು ಸಣ್ಣ ಉದ್ಯಮಗಳು: ಘಟಕ ವೆಚ್ಚದ ಶೇ. 70ರಷ್ಟು ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್ ಸಾಲ.

ಸ್ವಾವಲಂಬಿ ಸಾರಥಿ (ಸರಕು ವಾಹನ/ಟ್ಯಾಕ್ಸಿ): ಘಟಕ ವೆಚ್ಚದ ಶೇ. 75ರಷ್ಟು ಅಥವಾ ಗರಿಷ್ಠ ರೂ. 4 ಲಕ್ಷ ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್ ಸಾಲ ಅಥವಾ ಫಲಾನುಭವಿಯ ವಂತಿಕೆ.

ಫಾಸ್ಟ್ ಫುಡ್ ಟ್ರಕ್/ಮೊಬೈಲ್ ಕಿಚನ್ ಕಿಯೋಸ್ಕ್: ಘಟಕ ವೆಚ್ಚದ ಶೇ. 75ರಷ್ಟು ಅಥವಾ ಗರಿಷ್ಠ ರೂ. 4 ಲಕ್ಷ ಸಹಾಯಧನ ಹಾಗೂ ಉಳಿದ ಮೊತ್ತ ಬ್ಯಾಂಕ್ ಸಾಲ ಅಥವಾ ಫಲಾನುಭವಿಯ ವಂತಿಕೆ.

ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ:

ಮಹಿಳಾ ಸ್ವಸಹಾಯ ಸಂಘದ ಕನಿಷ್ಠ 10 ಸದಸ್ಯರಿಗೆ ಸ್ವಯಂ ಉದ್ಯೋಗಕ್ಕಾಗಿ ರೂ. 5 ಲಕ್ಷ ಘಟಕ ವೆಚ್ಚ ನೀಡಲಾಗುವುದು. ಇದರಲ್ಲಿ ರೂ. 2.50 ಲಕ್ಷ ಸಹಾಯಧನ ಮತ್ತು ರೂ. 2.50 ಲಕ್ಷ ನಿಗಮದಿಂದ ಸಾಲ ಸೌಲಭ್ಯ ದೊರೆಯಲಿದೆ.

ಗಂಗಾ ಕಲ್ಯಾಣ ಯೋಜನೆ:

1.50 ಎಕರೆಯಿಂದ 5 ಎಕರೆ ಒಣ/ಖುಷ್ಕಿ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆದು, ಪಂಪ್‌ಸೆಟ್ ಅಳವಡಿಸಿ ವಿದ್ಯುದ್ದೀಕರಣದೊಂದಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು (ಘಟಕ ವೆಚ್ಚ ರೂ. 3.75 ಲಕ್ಷ, ಇದರಲ್ಲಿ ರೂ. 50,000 ಸಾಲ ಒಳಗೊಂಡಿರುತ್ತದೆ).

ಭೂ ಒಡೆತನ ಯೋಜನೆ:

ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಗರಿಷ್ಠ ರೂ. 20 ಲಕ್ಷ ಮಿತಿಯಲ್ಲಿ (ಶೇ. 50 ಸಹಾಯಧನ ಮತ್ತು ಶೇ. 50 ಸಾಲ) ಕೃಷಿ ಜಮೀನು ಖರೀದಿಸಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನವಾಗಿರುತ್ತದೆ.

2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಬಳ್ಳಾರಿಯ ಕಂಟೋನ್ಮೆAಟ್‌ನ ನಂದಿ ಕಾಲೋನಿಯಲ್ಲಿರುವ ನಿಗಮದ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08392-24451/52 ಮೂಲಕ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now