Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಮೊದಲ ಬಾರಿಗೆ ಡಿಜಿಟಲ್ ಟಿಸಿ ವಿತರಣೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.25: ದ್ವಿತೀಯ ಪಿಯುಸಿ ಮುಗಿಸಿ ಮುಂದಿನ ಓದಿಗೆ ರೆಡಿಯಾಗುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಕಾಲೇಜು ಅಲೆಯುವ ಅಲೆದಾಟಕ್ಕೆ ಬ್ರೇಕ್ ಹಾಕಿರುವ ಸರ್ಕಾರ, ಇದೇ ಮೊದಲ ಬಾರಿಗೆ ಡಿಜಿಟಲ್ ವರ್ಗಾವಣೆ ಪ್ರಮಾಣ ಪತ್ರ (Digital Transfer Certificate) ವಿತರಿಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ತೀರ್ಮಾನದಂತೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಪದ್ಮಿನಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಡಿಜಿಟಲ್ ಟಿಸಿ ಡೌನ್ಲೋಡ್ ಮಾಡುವುದು ಹೇಗೆ?

ಈ ಬಾರಿ ವಿದ್ಯಾರ್ಥಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಸಂಪೂರ್ಣ ಸರಳಗೊಳಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಬಳಿ ಇರುವ ಫಲಿತಾಂಶದ ಡೇಟಾವನ್ನು ಬಳಸಿ, ತಂತ್ರಜ್ಞಾನದ ಮೂಲಕ ಈ ಡಿಜಿಟಲ್ ಟಿಸಿಗಳನ್ನು ಸ್ವಯಂಚಾಲಿತವಾಗಿ ಸಿದ್ಧಪಡಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲಿರುವ ಡಿಜಿ ಲಾಕರ್ (DigiLocker) ಆಪ್ ಮೂಲಕ ಅತ್ಯಂತ ಸುಲಭವಾಗಿ ತಮ್ಮ ಟಿಸಿಯನ್ನು ಪಡೆದುಕೊಳ್ಳಬಹುದು.

ಹೊಸ ಟಿಸಿಯಲ್ಲಿ ಏನಿರಲ್ಲ? ಏನಿರಲಿದೆ?

ಹಳೇ ಮಾದರಿಯ ವರ್ಗಾವಣೆ ಪತ್ರಗಳಿಗೆ ಹೋಲಿಸಿದರೆ ಈ ಹೊಸ ಡಿಜಿಟಲ್ ಟಿಸಿ ಸಂಪೂರ್ಣ ಭಿನ್ನವಾಗಿದ್ದು, ತಲೆನೋವು ತರುವ ಕೆಲವು ಕಾಲಂಗಳನ್ನು ಕೈಬಿಡಲಾಗಿದೆ.ಹಳೇ ನಮೂನೆಯಲ್ಲಿದ್ದ ಬಾಕಿ ಶುಲ್ಕದ ವಿವರ, ವಿದ್ಯಾರ್ಥಿವೇತನ ಹಾಗೂ ಹಾಜರಾತಿಯ ದಿನಗಳ ಲೆಕ್ಕಾಚಾರದ ಕಾಲಂಗಳನ್ನು ಈಗ ಡಿಲೀಟ್ ಮಾಡಲಾಗಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಡಿಜಿಟಲ್ ಲಿಂಕ್ ಮಾಡಲು ಸ್ಯಾಟ್ಸ್ (SATS) ನಂಬರ್ ಜೊತೆಗೆ, ಪರೀಕ್ಷಾ ರಿಜಿಸ್ಟರ್ ನಂಬರ್ ಹಾಗೂ ಅಪಾರ್ ಐಡಿ (APAAR ID) ಯನ್ನು ಕಡ್ಡಾಯವಾಗಿ ಅಳವಡಿಸಲಾಗಿದೆ. ಸರ್ಕಾರದ ಈ ಡಿಜಿಟಲ್ ಕ್ರಾಂತಿಯಿಂದಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಟಿಸಿಗಾಗಿ ಕಾಲೇಜುಗಳ ಮುಂದೆ ಗಂಟೆಗಟ್ಟಲೆ ಕಾಯುವುದು ತಪ್ಪಿದಂತಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now