Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ: ಸಾಮಾನ್ಯ ಭವಿಷ್ಯ ನಿಧಿ (GPF) ಬಡ್ಡಿ ದರ ಶೇ.7.1 ರಷ್ಟು ನಿಗದಿಪಡಿಸಿ ಸರ್ಕಾರ ಆದೇಶ

---Advertisement---

ಬೆಂಗಳೂರು.ಆಗಸ್ಟ್.11: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿಸುದ್ದಿ ನೀಡಿದೆ. ‘ಸಾಮಾನ್ಯ ಭವಿಷ್ಯ ನಿಧಿ’ (GPF) ವಂತಿಕೆದಾರರಿಗೆ ರಾಜ್ಯ ಸರ್ಕಾರವು ಮುಖ್ಯ ಆದೇಶವೊಂದನ್ನು ಹೊರಡಿಸಿದೆ.

2026-27ನೇ ಸಾಲಿನ ಎರಡನೇ ತ್ರೈಮಾಸಿಕ ಅವಧಿಗೆ ಅನ್ವಯವಾಗುವಂತೆ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಶೇಕಡಾ 7.1% ಕ್ಕೆ ನಿಗದಿಪಡಿಸಿ ಆರ್ಥಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಜುಲೈ 1, 2026 ರಿಂದ ಸೆಪ್ಟೆಂಬರ್ 30, 2026 ರವರೆಗಿನ ತ್ರೈಮಾಸಿಕ ಅವಧಿಗೆ (Q2) ಈ ಬಡ್ಡಿ ದರ ಅನ್ವಯವಾಗಲಿದೆ. ಈ ಕುರಿತು ಪ್ರಧಾನ ಮಹಾಲೇಖಾಪಾಲರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಎಲ್ಲಾ ಇಲಾಖೆಯ ಕಾರ್ಯದರ್ಶಿಗಳು, ಹೈಕೋರ್ಟ್ ರಿಜಿಸ್ಟ್ರಾರ್ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಸೂಚನೆ ನೀಡಲಾಗಿದೆ.

 

Join WhatsApp

Join Now

Join Telegram

Join Now