ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತು ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹ ಧನ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಉತ್ತೇಜಿಸಲು ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, ಮೆಟ್ರಿಕ್ ನಂತರ ವಿದ್ಯಾರ್ಥಿವೇತನ, ಎಸ್‌ಎಸ್‌ಎಲ್‌ಸಿ ಪ್ರೋತ್ಸಾಹ ಧನ, ಮೆಟ್ರಿಕ್ ನಂತರ ಪ್ರೋತ್ಸಾಹ ಧನ ಮತ್ತು ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾವಕಾಶ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ಆನ್‌ಲೈನ್ ಮೂಲಕ ಅನುಷ್ಟಾನಗೊಳಿಸಲಾಗುತ್ತಿದೆ.
2026-27ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತು ವಿದ್ಯಾರ್ಥಿ ನಿಲಯಗಳ ಪ್ರವೇಶಾವಕಾಶ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವಂತೆ ಮಾಡಲು ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹ ಧನ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದರಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ವಿಳಾಸ: www.sw.kar.nic.in ಅನ್ನು ನೋಡಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










