Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಡುಗೊಲ್ಲ ಸಮುದಾಯಕ್ಕೆ ಗುಡ್‌ನ್ಯೂಸ್; ಸಾಲ, ಸಹಾಯಧನ ಪಡೆಯಲು ಅರ್ಜಿ ಆಹ್ವಾನ, ಸೆ.30 ಗಡುವು

Post-matric scholarships, incentive grants, and hostel admission for Scheduled Caste students: Online applications invited
---Advertisement---

ಚಿತ್ರದುರ್ಗ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಸಾಲ ಹಾಗೂ ಸಹಾಯಧನ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಈ ಗಡುವು ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಗಳಿಗೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಇತರ ನಿಯಮಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.ಅರ್ಜಿ ಆಯ್ಕೆ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ 33%, ಅಂಗವಿಕಲರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ 1% ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ.

ಸಾಲ ಮತ್ತು ಸಹಾಯಧನ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳಿಗಾಗಿ 7899899039 ಅಥವಾ 080-22374848 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಚ್.ಸಿ. ಸಾತ್ವಿಕ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now