ಸುದ್ದಿಒನ್,ಬೆಂಗಳೂರು,ಜೂನ್.02: ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್ ದರ ಮತ್ತೆ ಕೈಸುಡುತ್ತಿದ್ದರೂ, ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಸದ್ಯಕ್ಕಂತೂ ಹೋಟೆಲ್ ಬಿಲ್ ಶಾಕ್ ಇರುವುದಿಲ್ಲ. ಸಿಲಿಂಡರ್ ಬೆಲೆ ಹೆಚ್ಚಳವಾಗಿದ್ದರೂ ಸಹ, ಸಾರ್ವಜನಿಕರ ಹಿತದೃಷ್ಟಿಯಿಂದ ಹೋಟೆಲ್ ತಿಂಡಿ-ಊಟದ ದರವನ್ನು ಸದ್ಯಕ್ಕೆ ಬದಲಾಯಿಸದಿರಲು ಬೆಂಗಳೂರು ಹೋಟೆಲ್‌ಗಳ ಸಂಘ (Bruhat Bangalore Hotels Association) ಮಹತ್ವದ ನಿರ್ಧಾರ ಕೈಗೊಂಡಿದೆ.
ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಕಂಗಾಲಾಗಿದ್ದಾರೆ. ಈ ಹೊತ್ತಿನಲ್ಲಿ ಹೋಟೆಲ್ ದರಗಳನ್ನೂ ಹೆಚ್ಚಿಸಿದರೆ ಮಧ್ಯಮ ವರ್ಗದ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.ಪದೇ ಪದೇ ಬೆಲೆ ಏರಿಕೆ ಮಾಡಿದರೆ ಜನ ಹೋಟೆಲ್‌ಗಳಿಗೆ ಬರುವುದನ್ನು ಕಮ್ಮಿ ಮಾಡಬಹುದು ಎನ್ನುವ ಆತಂಕ ಉದ್ಯಮಿಗಳಲ್ಲಿದೆ. ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಹೋಟೆಲ್ ಮಾಲೀಕರು ತಮ್ಮ ಲಾಭದ ಪ್ರಮಾಣವನ್ನು ಕೊಂಚ ಕಡಿತಗೊಳಿಸಿಕೊಂಡು, ಹಳೆಯ ದರದಲ್ಲೇ ಗ್ರಾಹಕರಿಗೆ ಸೇವೆ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನ ಹೆಮ್ಮೆಯ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಹಾಗೂ ಊಟದ ದರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಒಟ್ಟಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯ ಬಿಸಿಯ ನಡುವೆಯೂ ಗ್ರಾಹಕರ ಜೇಬಿಗೆ ಕತ್ತರಿ ಹಾಕದ ಬೆಂಗಳೂರು ಹೋಟೆಲ್ ಮಾಲೀಕರ ನಿರ್ಧಾರ ಸದ್ಯಕ್ಕೆ ರಾಜಧಾನಿ ಜನತೆಗೆ ದೊಡ್ಡ ನಿರಾಳತೆ ತಂದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















