Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಂತ ಸೂರಿನ ಕನಸುಕಂಡವರಿಗೆ ಗುಡ್ ನ್ಯೂಸ್ : ‘ಭೂ ಗ್ಯಾರಂಟಿ’ ಯೋಜನೆಯಡಿ 15 ಲಕ್ಷ ಉಚಿತ ನಿವೇಶನ

Good news for those dreaming of a home of their own: A free site worth ₹15 lakh under the ‘Bhu Guarantee’ scheme
---Advertisement---

ಬೆಂಗಳೂರು: ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಸ್ವಂತ ಸೂರು ಇರಬೇಕು ಹಾಗೂ ಪ್ರತಿಯೊಬ್ಬರಿಗೂ ಗೌರವಯುತ ಬದುಕಿನ ನೆಲೆ ಸಿಗಬೇಕು ಎಂಬ ಆಶಯದೊಂದಿಗೆ, ರಾಜ್ಯ ಸರ್ಕಾರವು ವಸತಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ವಸತಿರಹಿತ ಮತ್ತು ಭೂರಹಿತ ಕುಟುಂಬಗಳಿಗೆ ಉಚಿತ ನಿವೇಶನ, ಸ್ವಂತ ಮನೆ ನಿರ್ಮಾಣಕ್ಕೆ ಹೆಚ್ಚಿನ ಆರ್ಥಿಕ ನೆರವು ಹಾಗೂ ಶ್ರಮಿಕ ಸಮುದಾಯಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಒದಗಿಸುವ ಮೂಲಕ ವಸತಿ ಸೌಲಭ್ಯಗಳನ್ನು ವಿಸ್ತರಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ರಾಜ್ಯದ ವಸತಿರಹಿತ ಮತ್ತು ಭೂರಹಿತ ಕುಟುಂಬಗಳಿಗೆ ವಸತಿ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ‘ಭೂ ಗ್ಯಾರಂಟಿ’ ಯೋಜನೆಯಡಿ ಒಟ್ಟು 15 ಲಕ್ಷ ಉಚಿತ ನಿವೇಶನಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ. ಇದರ ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳ ಅಭಿವೃದ್ಧಿಗಾಗಿ ₹1,000 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈ ಯೋಜನೆಯ ಮೂಲಕ ಮಾಜಿ ಸೈನಿಕರು ಹಾಗೂ ದುರ್ಬಲ ವರ್ಗದ ಕುಟುಂಬಗಳ ಸ್ವಂತ ಸೂರಿನ ಕನಸನ್ನು ನನಸು ಮಾಡಲಾಗುತ್ತಿದೆ.

ವಸತಿ ಸೌಲಭ್ಯವನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ‘ಮುಖ್ಯಮಂತ್ರಿಗಳ ನಮ್ಮ ಮನೆ’ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಕರ್ನಾಟಕ ಗೃಹ ಮಂಡಳಿಯ ಮೂಲಕ ರಾಜ್ಯಾದ್ಯಂತ 6,600 ಎಕರೆ ಜಮೀನಿನಲ್ಲಿ ಅಂದಾಜು ₹11,655 ಕೋಟಿ ವೆಚ್ಚದಲ್ಲಿ 93,240 ನಿವೇಶನಗಳನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟ ತೀರ್ಮಾನಿಸಿದೆ. ಇದರಲ್ಲಿ ಸಮುದಾಯದ ಶ್ರಮಿಕರಿಗೆ ಶೇ. 50ರ ರಿಯಾಯಿತಿ ದರದಲ್ಲಿ 50,000 ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಈ ಉದ್ದೇಶಕ್ಕಾಗಿ ₹2,914 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ.

ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ 1 ಲಕ್ಷ ಹೊಸ ಮನೆಗಳನ್ನು ನಿರ್ಮಿಸಿಕೊಡಲು ₹2,241 ಕೋಟಿ ಅನುದಾನ ನೀಡಲಾಗಿದ್ದು, ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರೊಂದಿಗೆ ಮನೆ ನಿರ್ಮಾಣದ ಸಹಾಯಧನವನ್ನೂ ಸರ್ಕಾರ ಗಣನೀಯವಾಗಿ ಹೆಚ್ಚಿಸಿದೆ. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಸಹಾಯಧನವನ್ನು ₹1.20 ಲಕ್ಷದಿಂದ ₹2 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸಹಾಯಧನವನ್ನು ₹2 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಸೂರು ಎನ್ನುವುದು ಕೇವಲ ಕಟ್ಟಡವಲ್ಲ, ಅದು ಕುಟುಂಬದ ಭದ್ರತೆ, ನೆಮ್ಮದಿ ಮತ್ತು ಸ್ವಾಭಿಮಾನದ ಸಂಕೇತವಾಗಿದ್ದು, ಪ್ರತಿಯೊಂದು ಅರ್ಹ ಕುಟುಂಬದ ಈ ಕನಸನ್ನು ಸರ್ಕಾರ ಖಂಡಿತವಾಗಿಯೂ ನನಸು ಮಾಡಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

Join WhatsApp

Join Now

Join Telegram

Join Now