Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ; ನಾಳೆಯೇ ನೇರ ಸಂದರ್ಶನ

---Advertisement---

ಬಳ್ಳಾರಿ; ಜಿಲ್ಲೆಯ ಸುತ್ತಮುತ್ತ ಕೆಲಸ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್. ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಏಪ್ರಿಲ್ 11 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತರು ನಾಳೆಯೇ ಸಂದರ್ಶನದಲ್ಲಿ ಭಾಗಿಯಾಗಬಹುದು. 21 ರಿಂದ 60 ವರ್ಷ ವಯಮಿತಿ ಇರುವವರು ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ‌. ಬಳ್ಳಾರಿ ತಾಲೂಕಿನ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2025-26ನೇ ಸಾಲಿಗೆ ವಿವಿಧ ಹುದ್ದೆಗಳ ಭರ್ತಿಗೆ ವಾಕ್ ಇನ್ ಸಂದರ್ಶನ ಏರ್ಪಡಿಸಲಾಗಿದೆ. ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.

ನವೋದಯ ಅಥವಾ ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ವಾಕ್ ಇನ್ ಸಂದರ್ಶನ ಏರ್ಪಡಿಸಲಾಗಿದೆ. ಈ ಹುದ್ದೆಗಳು ತಾತ್ಕಾಲಿಕವಾಗಿರುತ್ತವೆ ಎಂಬುದು ಗಮನಾರ್ಹವಾದ ವಿಚಾರ. ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ಹಾಜರಾಗಬೇಕು. ಹಾಗೇ ಸಂದರ್ಶನದ ಸಮಯದಲ್ಲಿ ಬಂದಂತ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಭತ್ಯೆ ಇರುವುದಿಲ್ಲ.

 

ಕನ್ನಡ ಶಿಕ್ಷಕ 1, ಜೀವಶಾಸ್ತ್ರ ಶಿಕ್ಷಕ 1, ಇಂಗ್ಲೀಷ್ ಭಾಷೆಯಲ್ಲಿ ತರಬೇತಿ ಪಡೆದ ಶಿಕ್ಷಕ 1, ಕನ್ನಡದಲ್ಲಿ ತರಬೇತಿ ಪಡೆದ ಪದವೀಧರ ಶಿಕ್ಷಕರು 2, ದೈಹಿಕ ಶಿಕ್ಷಕರು (ಪುರುಷ ಮತ್ತು ಮಹಿಳೆ) 1+ 1 ಮತ್ತು ಹಾಸ್ಟೆಲ್ ವಾರ್ಡನ್ 1 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ವಿದ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08392-242453 ಸಂಪರ್ಕಿಸಿ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment