Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟನೆಯ ಕನಸು ಕಾಣುವವರಿಗೆ ಗುಡ್‌ನ್ಯೂಸ್; ಟಿ.ಎನ್. ಸೀತಾರಾಮ್ ಧಾರಾವಾಹಿಗೆ ಆಡಿಷನ್

---Advertisement---

ನಟನೆಯ ಪ್ರತಿಭೆ ಇದ್ದರೂ ಅವಕಾಶ ಸಿಗುತ್ತಿಲ್ಲ ಎಂದು ಬೇಸರದಲ್ಲಿರುವವರಿಗೆ ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ಸುವರ್ಣಾವಕಾಶವೊಂದನ್ನು ನೀಡಿದ್ದಾರೆ. ‘ಮಾಯಾಮೃಗ’, ‘ಮನ್ವಂತರ’, ‘ಮುಕ್ತ’ ಹಾಗೂ ‘ಮುಕ್ತ ಮುಕ್ತ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳನ್ನು ನೀಡಿರುವ ಅವರು ಇದೀಗ ಹೊಸ ಧಾರಾವಾಹಿಯೊಂದನ್ನು ಆರಂಭಿಸುತ್ತಿದ್ದು, ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಲು ಮುಂದಾಗಿದ್ದಾರೆ.

ಹೊಸ ಧಾರಾವಾಹಿಗಾಗಿ ನಾಯಕ, ನಾಯಕಿ ಸೇರಿದಂತೆ ವಿವಿಧ ಪೋಷಕ ಪಾತ್ರಗಳಿಗೆ ಕಲಾವಿದರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಟಿ.ಎನ್. ಸೀತಾರಾಮ್, ಹೊಸ ಧಾರಾವಾಹಿ ಆರಂಭಿಸುತ್ತಿದ್ದು, ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.ಆಯ್ಕೆ ಪ್ರಕ್ರಿಯೆಯ ಭಾಗವಾಗಿ ಮೊದಲ ಹಂತದ ಆಡಿಷನ್‌ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಲಿದೆ. ಇದೇ ತಿಂಗಳ 26ರಂದು ಮೈಸೂರಿನ ಪ್ರಿನ್ಸ್ ಹೋಟೆಲ್‌ನಲ್ಲಿ ಆಡಿಷನ್‌ ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಡಿಷನ್‌ಗೆ ಬರುವವರು ತಮ್ಮ ಫೋಟೋಗಳನ್ನು ಜೊತೆಯಲ್ಲಿ ತರಬೇಕು ಎಂದು ಸೂಚಿಸಲಾಗಿದೆ. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸುವ ಅವಕಾಶಕ್ಕಾಗಿ ಕಾಯುತ್ತಿರುವ ಹೊಸ ಪ್ರತಿಭೆಗಳಿಗೆ ಇದು ಉತ್ತಮ ವೇದಿಕೆಯಾಗುವ ಸಾಧ್ಯತೆಯಿದೆ.

ಇದೇ ವೇಳೆ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅವಕಾಶ ನೀಡುವುದಾಗಿ ಹೇಳಿ ವಂಚಿಸುವ ಪ್ರಕರಣಗಳೂ ನಡೆಯುತ್ತಿರುವುದರಿಂದ ಅಭ್ಯರ್ಥಿಗಳು ಎಚ್ಚರಿಕೆ ವಹಿಸುವುದು ಅಗತ್ಯ. ಯಾವುದೇ ವದಂತಿ ಅಥವಾ ಅನಧಿಕೃತ ಮಾಹಿತಿಗೆ ಕಿವಿಗೊಡದೆ, ನಿರ್ದೇಶಕರು ನೀಡಿರುವ ಅಧಿಕೃತ ಮಾಹಿತಿಯನ್ನು ಆಧರಿಸಿ ಆಡಿಷನ್‌ಗೆ ಹಾಜರಾಗುವಂತೆ ಸಲಹೆ ನೀಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now