Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಶೇ. 12.50 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ

---Advertisement---

ಸುದ್ದಿಒನ್,ಬೆಂಗಳೂರು,ಮೇ.12: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ (KSRTC, BMTC, NWKRTC ಮತ್ತು KKRTC) ನೌಕರರು ಹಾಗೂ ಅಧಿಕಾರಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರಿಗೆ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಗೆ ಸರ್ಕಾರ ಅಸ್ತು ಎಂದಿದ್ದು, ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

31.03.2025ರಂದು ಪಡೆಯುತ್ತಿದ್ದ ಮೂಲ ವೇತನಕ್ಕೆ ಶೇ. 12.50 ರಷ್ಟು ಹೆಚ್ಚಳ ಮಾಡಿ ವೇತನ ಶ್ರೇಣಿಗಳನ್ನು ಪರಿಷ್ಕರಿಸಲಾಗಿದೆ. ಈ ಪರಿಷ್ಕೃತ ವೇತನವು ಏಪ್ರಿಲ್ 1, 2025 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.ನಾಲ್ಕೂ ಸಾರಿಗೆ ನಿಗಮಗಳ ಎಲ್ಲಾ ಅಧಿಕಾರಿಗಳು, ನೌಕರರು ಮತ್ತು ಪೂರ್ವಾಪರ ಕಿಂಕೋ (Kinkow) ನೌಕರರಿಗೂ ಈ ವೇತನ ಹೆಚ್ಚಳ ಅನ್ವಯವಾಗಲಿದೆ. ಉನ್ನತ ವೇತನ ಶ್ರೇಣಿ ಹಾಗೂ ಸೆಲೆಕ್ಷನ್ ಗ್ರೇಡ್ ವೇತನ ಶ್ರೇಣಿಗಳಿಗೂ ಇದು ಅನ್ವಯಿಸುತ್ತದೆ.ಹೆಚ್ಚಳವಾದ ವೇತನವನ್ನು ಜುಲೈ 1, 2026 ರ ಮಾಹೆಯ ವೇತನದೊಂದಿಗೆ ಜಾರಿಗೆ ತಂದು ನಗದು ರೂಪದಲ್ಲಿ ಪಾವತಿಸಲು ಸೂಚಿಸಲಾಗಿದೆ.

ದಿನಾಂಕ 01.04.2025 ರಿಂದ 30.06.2026 ರ ಅವಧಿಯ ವೇತನ ಪರಿಷ್ಕರಣೆಯ ಹಿಂಬಾಕಿ (Arrears) ಮೊತ್ತವನ್ನು ನಿಗಮಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪಾವತಿಸಲು ಸರ್ಕಾರ ನಿರ್ಧರಿಸಿದೆ.

ಈ ವೇತನ ಪರಿಷ್ಕರಣೆಯು ದಿನಾಂಕ 01.04.2025 ರಿಂದ 31.03.2029 ರವರೆಗೆ ಅಂದರೆ ಒಟ್ಟು ನಾಲ್ಕು ವರ್ಷಗಳ ಅವಧಿಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.ಸಾರಿಗೆ ನಿಗಮಗಳು ಆರ್ಥಿಕ ನಷ್ಟದಲ್ಲಿದ್ದರೂ ಸಹ, ನೌಕರರ ಹಿತದೃಷ್ಟಿಯಿಂದ ಸರ್ಕಾರವು ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದಿಂದ ರಾಜ್ಯದ ಲಕ್ಷಾಂತರ ಸಾರಿಗೆ ನೌಕರರ ಕುಟುಂಬಗಳಿಗೆ ಅನುಕೂಲವಾಗಲಿದೆ.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...