ಬೆಂಗಳೂರು.ಜುಲೈ.17: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಯು.ಪಿ.ಎಸ್.ಸಿ (UPSC) ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಆಯುಕ್ತರ ಕಚೇರಿ (ನಂ.16-ಡಿ, 3ನೇ ಮಹಡಿ, ಡಿ. ದೇವರಾಜ ಅರಸು ಭವನ, ಮಿಲ್ಲಿಂಗ್ ಕೆರೆ ಅಂಗಳ, ವಸಂತ ನಗರ, ಬೆಂಗಳೂರು-560052) ಹೊರಡಿಸಿರುವ ಪ್ರಕಟಣೆಯ ಪ್ರಕಾರ (ಸಂ:ಹಿಂವಕಇ/ಟಿ-1/ಪಪೂತ/ಸಿಆರ್-01/2026-27, ದಿನಾಂಕ: 15.07.2026), ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ವಸತಿಯೊಂದಿಗೆ ಈ ತರಬೇತಿಯನ್ನು ನೀಡಲಾಗುತ್ತದೆ. ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03.08.2026 ಆಗಿರುತ್ತದೆ.
ಅರ್ಹತೆ ಮತ್ತು ಸೂಚನೆಗಳು:
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ (Degree) ಪಡೆದಿರಬೇಕು.
ವರ್ಗ: ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇರಿರಬೇಕು.
ಆದಾಯ ಮಿತಿ: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ. 5.00 ಲಕ್ಷಗಳ ಒಳಗಿರಬೇಕು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ವಿವರ: ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
ತರಬೇತಿ ಭತ್ಯೆ: ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇಲಾಖೆಯಿಂದಲೇ ಉಚಿತ ಊಟ ಹಾಗೂ ವಸತಿಯೊಂದಿಗೆ ತರಬೇತಿಯನ್ನು ನೀಡುವ ಹಿನ್ನೆಲೆಯಲ್ಲಿ, ಯಾವುದೇ ತರಬೇತಿ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ: ಇಲಾಖಾ ವೆಬ್ಸೈಟ್ಗಳಾದ https://bcwd.karnataka.gov.in ಅಥವಾ sevasindhuservices.karnataka.gov.in ಅನ್ನು ನೋಡಬಹುದು.
ಸಹಾಯವಾಣಿ:
ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಹಾಯಕ್ಕಾಗಿ 8050770004 ಸಂಖ್ಯೆಯನ್ನು ಸಂಪರ್ಕಿಸಬಹುದು. (ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ, ಬೆಳಿಗ್ಗೆ 10.00 ರಿಂದ ಸಂಜೆ 5.30 ರವರೆಗೆ ಮಾತ್ರ ಅವಕಾಶವಿರುತ್ತದೆ).

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











