Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರದಿಂದ ಸಿಹಿ ಸುದ್ದಿ: ‘ಸಾರ್ಥಕ್ ಪಿಡಿಎಸ್’ ಯೋಜನೆ ಜಾರಿಗೆ ಗ್ರೀನ್ ಸಿಗ್ನಲ್!

---Advertisement---

ಸುದ್ದಿಒನ್,ನವದೆಹಲಿ,ಜೂನ್.2: ದೇಶದ ರೇಷನ್ ಕಾರ್ಡ್‌ದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನಡೆಯುವ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸಂಪೂರ್ಣ ಪಾರದರ್ಶಕತೆಯನ್ನು ತರಲು ಕೇಂದ್ರ ಸರ್ಕಾರ ಭರ್ಜರಿ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ ಬಹುನಿರೀಕ್ಷಿತ ‘ಸಾರ್ಥಕ್ ಪಿಡಿಎಸ್’ (Sarthak PDS) ಯೋಜನೆಗೆ ಕೇಂದ್ರ ಅಸ್ತು ಎಂದಿದೆ.

ದೇಶದ ಜನರಿಗೆ ಅಗತ್ಯವಿರುವಷ್ಟು ಮತ್ತು ಗುಣಮಟ್ಟದ ಆಹಾರ ಧಾನ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಹೊಸ ಸುಧಾರಣೆಗೆ ಶ್ರೀಕಾರ ಬರೆದಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದೇಶದ ಸುಮಾರು 81.35 ಕೋಟಿ ಜನರಿಗೆ ಆಹಾರ ಧಾನ್ಯಗಳನ್ನು ಸಮರ್ಥವಾಗಿ ತಲುಪಿಸಲು ಈ ‘ಸಾರ್ಥಕ್ ಪಿಡಿಎಸ್’ ಯೋಜನೆ ಸಹಕಾರಿಯಾಗಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಸರ್ಕಾರ 25,530 ಕೋಟಿ ರೂಪಾಯಿಗಳನ್ನು ಘೋಷಿಸಿದೆ.

ಮುಂದಿನ 5 ವರ್ಷಗಳ ಕಾಲ ಯೋಜನೆ ಜಾರಿ

ಈ ಯೋಜನೆಯು ಮುಂದಿನ ಐದು ವರ್ಷಗಳ ಕಾಲ ಸಾಗಲಿದೆ. ಪಡಿತರ ಸಾಗಣೆ, ಆಹಾರ ಧಾನ್ಯಗಳ ನಿರ್ವಹಣೆ ಹಾಗೂ ನ್ಯಾಯಬೆಲೆ ಅಂಗಡಿ (FPS) ವಿತರಕರ ಮಾರ್ಜಿನ್ ಸೇರಿದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಭರಿಸುವ ವೆಚ್ಚವನ್ನು ಸರಿದೂಗಿಸುವುದು ‘ಸಾರ್ಥಕ್ ಪಿಡಿಎಸ್’ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಏನಿದು ‘ಸಾರ್ಥಕ್ ಪಿಡಿಎಸ್’ ಯೋಜನೆ?
ಪಡಿತರ ವಿತರಣಾ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಳ್ಳಲಿದೆ. ಇದಕ್ಕಾಗಿ ವಿಶೇಷ ಅಪ್ಲಿಕೇಶನ್ ಒಂದನ್ನು ಪರಿಚಯಿಸಲಾಗುತ್ತಿದ್ದು, ಆಹಾರ ಧಾನ್ಯಗಳ ದಾಸ್ತಾನು ಮತ್ತು ವಿತರಣೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಇದು ತಡೆಯುತ್ತದೆ.

ಬಯೋಮೆಟ್ರಿಕ್ ದೃಢೀಕರಣ: ಆಧಾರ್ ಅಥವಾ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಜೋಡಿಸುವ ಮೂಲಕ ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಪಡಿತರ ಸಿಗುವಂತೆ ಮಾಡಲಾಗುತ್ತದೆ.

ರಿಯಲ್-ಟೈಮ್ ಟ್ರ್ಯಾಕಿಂಗ್: ಗೋದಾಮುಗಳಿಂದ ಹೊರಡುವ ಧಾನ್ಯಗಳು ನ್ಯಾಯಬೆಲೆ ಅಂಗಡಿಗಳಿಗೆ ಎಷ್ಟು ತಲುಪಿವೆ ಎಂಬುದನ್ನು ರಿಯಲ್-ಟೈಮ್ (ನೈಜ ಸಮಯ) ನಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತದೆ.

ಸರಳೀಕೃತ ಡಿಜಿಟಲೀಕರಣ: ರೇಷನ್ ಕಾರ್ಡ್‌ಗಳ ನಿರ್ವಹಣೆ, ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಪ್ರಕ್ರಿಯೆಗಳನ್ನು ಈ ವ್ಯವಸ್ಥೆಯ ಮೂಲಕ ಇನ್ನಷ್ಟು ಸರಳಗೊಳಿಸಲಾಗುತ್ತದೆ.

ಗೋದಾಮುಗಳಿಂದ ಎಷ್ಟು ಪ್ರಮಾಣದ ಅಕ್ಕಿ, ಬೇಳೆಕಾಳುಗಳು ಬಿಡುಗಡೆಯಾಗಿವೆ, ಅವುಗಳಲ್ಲಿ ಎಷ್ಟು ನ್ಯಾಯಬೆಲೆ ಅಂಗಡಿಗಳನ್ನು ತಲುಪಿವೆ ಮತ್ತು ಜನರಿಗೆ ಎಷ್ಟು ವಿತರಣೆಯಾಗಿದೆ ಎಂಬ ಸಂಪೂರ್ಣ ನಿಖರ ಮಾಹಿತಿ ಇನ್ನುಮುಂದೆ ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now