ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರು ಕಿಟ್ಟ ಮಾತನ್ನ ಉಳಿಸಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದನ್ನ ನೀಡಿದ್ದಾರೆ. ಗೌರವ ಧನ ಹೆಚ್ಚಿಸುವುದಾಗಿ ಅಂದು ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆಯೇ ನಡೆದುಕೊಂಡಿದ್ದಾರೆ. ಗೌರವ ಧನ ಹೆಚ್ಚಿಸಿ, ಅಧಿಕೃತ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 100 ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಪ್ರತಿ 2500 ಜನಸಂಖ್ಯೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯನ್ನು ಆಯ್ಕೆ ಮಾಡಲಾಗುವುದು. ಒದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 42,524 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 41,000 ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಸಮಾನವಾಗಿ ತಂಡ ಆಧಾರಿತ ಪ್ರೋತ್ಸಾಹ ಧನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತರಯರಿಗೆ ಮಾಸಿಕವಾಗಿ 1000 ರೂಪಾಯಿಯಂತೆ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ.
2025-26ನೇ ಸಾಲಿನ ಆಯವ್ಯಯದ ಕಂಡಿಕೆ 148 ರ ಘೋಷಣೆಯನ್ವಯ ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರೂ. 1000/- ಗಳ ( ಒಂದು ಸಾವಿರ ರೂಪಾಯಿಗಳು) ತಂಡ ಆಧಾರಿತ ಪ್ರೋತ್ಸಾಹ ಧನವನ್ನು ಪಾವತಿಸಲು ಹಾಗೂ ಇದಕ್ಕಾಗಿ ತಗಲುವ ವೆಚ್ಚ ರೂ.1800.48 2211-00-103-0-11-324 ಲಕ್ಷಗಳನ್ನು ರಣ ಒದಗಿಸಲಾದ 0.2500.00 ಲಕ್ಷಗಳ ಅನುದಾನದಲ್ಲಿ ಭರಿಸಲು ಅನುಮೋದನೆ ನೀಡಲಾಗಿದೆ. ಗೌರವ ಧನ ಹೆಚ್ಚಳ ಮಾಡಿದ್ದು ಆಶಾ ಕಾರ್ಯಕರ್ತೆಯರ ಸಂತಸಕ್ಕೆ ಕಾರಣವಾಗಿದೆ.














