ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು; ಈ ಕಾಲೇಜುಗಳಲ್ಲಿ ಪಾಠ ಮಾಡುವ ಅತಿಥಿ ಶಿಕ್ಷಕರ ಪಾಡು ಕೇಳುವಂತಿಲ್ಲ ಎಂಬಂತಿರುತ್ತೆ. ಪರ್ಮನೆಂಟ್ ಶಿಕ್ಷಕರ ಸೌಲಭ್ಯ ಹೇಗೋ ಇರುತ್ತೆ. ಆದರೆ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಹೆಚ್ಚಿನದ್ದೇನು ಸಿಗಲ್ಲ. ಅದಕ್ಕಾಗಿ ಸಾಕಷ್ಟು ಸಲ ಹೋರಾಟವೂ ನಡೆದಿದೆ. ಪ್ರತಿಭಟನೆಯನ್ನು ಮಾಡಿದ್ದಾರೆ. ಸರ್ಕಾರ ಆಗಾಗ ಅವರ ಬಯಕೆಗಳಿಗೂ ಸ್ಪಂದಿಸಿದೆ. ಇದೀಗ ಮತ್ತೊಮ್ಮೆ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅದೇನು ಅಂದ್ರೆ ವೇತನ ಹೆಚ್ಚಳದ ಬಗ್ಗೆ. ಹಾಗಾದ್ರೆ ಹೆಚ್ಚಾದದ್ದು ಎಷ್ಟು..? ಏನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಗೌರವ ಸಂಭಾವನೆಯನ್ನ ಹೆಚ್ಚಳ ಮಾಡಿದೆ. ತಲಾ 2 ಸಾವಿರ ಹೆಚ್ಚಳ ಮಾಡಿ, ಸಿಹಿ ಸುದ್ದಿ ನೀಡಿದೆ. ಈ ಸಂಭಾವನೆ ಹೆಚ್ಚಳದ ಆದೇಶ ಮುಂದೆ ಬೇರೆ ಆದೇಶ ನೀಡುವ ತನಕವೂ ಜಾರಿಯಲ್ಲಿರಲಿದೆ.
ಈ ಹಿಂದೆ ಕೂಡ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10 ಸಾವಿರ ರೂಪಾಯಿಯನ್ನು ಹೆಚ್ಚಳ ಮಾಡಿತ್ತು. ಹಾಗೇ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ರೂಪಾಯಿಯನ್ನು ಹೆಚ್ಚಳ ಮಾಡಿತ್ತು. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ಎರೆಉ ಸಾವಿರ ಜಾಸ್ತಿ ಮಾಡಿದೆ. ಈ ಮೂಲಕ 12 ಸಾವಿರ ಗೌರವ ಧನ ಸಿಗಲಿದೆ. ಇದು ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯನ್ನ ನೀಡಿದಂತೆ ಆಗಿದೆ. ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಪ್ರತಿ ತಿಂಗಳು ಇನ್ಮುಂದೆ 12 ಸಾವಿರ ಸಿಗಲಿದೆ.
.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್