ಬಿಪಿಎಲ್ ಕಾರ್ಡ್ ರದ್ದಾದವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ..!

suddionenews
1 Min Read

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದವರ ಮಾಹಿತಿಯನ್ನೆಲ್ಲಾ ಕಲೆ ಹಾಕಿ, ಅನರ್ಹರ ಬಿಎಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಬೇಕೆಂದು ಸರ್ಕಾರ ಸೂಚನೆ ನೀಡಿತ್ತು. ಆದರೆ ಇದರ ನಡುವೆ ಅರ್ಹರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿತ್ತು. ಇದರಿಂದ ಸಾಕಷ್ಟು ಜನ ಸಂಕಷ್ಟಕ್ಕೆ ಸಿಲುಕಿದ್ದರು, ಕಣ್ಣೀರು ಹಾಕಿದ್ದರು. ಇದೀಗ ಅವರಿಗೆಲ್ಲ ಒಂದು ನೆಮ್ಮದಿಯ ಸುದ್ದಿಯನ್ನು ಸರ್ಕಾರ ನೀಡಿದೆ.

ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಿದೆ. ಆಗಿರುವ ಪ್ರಮಾದವನ್ನು ಸರಿಪಡಿಸಲು ಇದೇ ನವೆಂಬರ್ 28ರವರೆಗೆ ಸಮಯವಕಾಶವನ್ನು ಆಹಾರ ಇಲಾಖೆ ಸಚಿವ ಮುನಿಯಪ್ಪ ನೀಡಿದ್ದಾರೆ. ಅರ್ಹರಾಗಿದ್ದು ಬಿಪಿಎಲ್ ಕಾರ್ಡ್ ವಂಚಿತರಾದವರು ಚಿಂತೆ ಮಾಡಬೇಕಿಲ್ಲ. ಇನ್ನೂ ಮೂರು ದಿನಗಳ ಒಳಗೆ ಪಡಿತರ ಪಡೆಯಬಹುದು ಎಂಬುದನ್ನು ಸಚುವರು ತಿಳಿಸಿದ್ದಾರೆ.

ಪರಿಶೀಲನೆ ಮಾಡಿ ಅರ್ಹರಿಗೆ ಬಿಪಿಎಲ್ ಕಾರ್ಡ್ ವಾಪಾಸ್ ಆಗಲಿದೆ. ನವೆಂಬರ್ 28ರ ಒಳಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸೀರಿಯಸ್ ಆಗಿ ತಿಳಿಸಲಾಗಿದೆ‌. ಬಿಪಿಎಲ್ ಕಾರ್ಡ್ ಗೊಂದಲ ನಿವಾರಣೆಯಾಗಿದೆ. ಒಂದು ವಾರದಲ್ಲಿ ಗೊಂದಲ ಪರಿಹರಿಸುವುದಾಗಿ ಹೇಳಿದ್ದೆ. ನವೆಂಬರ್ 28ರ ನಂತರ ಹಿಂದಿನಂತೆ ಬಿಪಿಎಲ್ ಕಾರ್ಡ್ ನವರು ಪಡಿತರ ಪಡೆಯಬಹುದು. ಬಿಪಿಎಲ್ ಕಾರ್ಡ್ ಪರಿಷ್ಕರಣೆಯಲ್ಲಿ ನಾವೂ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅನುಸರಿಸಿದ್ದೇವೆ ಹೊರತು ಯಾವುದೇ ಅವೈಜ್ಞಾನಿಕ ಕ್ರಮ ಅನುಸರಿಸಿಲ್ಲ ಎಂದು ಸಚುವ ಮುನಿಯಪ್ಪ ತಿಳಿಸಿದ್ದಾರೆ. ಇನ್ನು ಎರಡು ದಿನದ ಒಳಗೆ ಎಲ್ಲಾ ಗೊಂದಲಗಳಿಗೂ ಪರಿಹಾರ ಸಿಗಲಿದೆ ಅಂತಾನು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *