ಬೆಂಗಳೂರು: ಶಿಕ್ಷಕ ಹುದ್ದೆಗಳಿಗೆ ಆಕಾಂಕ್ಷಿಯಾಗಿರುವ ಅಭ್ಯರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಶೀಘ್ರವೇ 15 ಸಾವಿರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ರಾಜ್ಯದ ಕಾಲೇಜುಗಳಲ್ಲಿ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಹಾಗೂ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಒಪ್ಪಿಗೆ ನೀಡಿದ್ದಾರೆ. 15,000 ಶಿಕ್ಷಕರ ಭರ್ತಿಯ ಅಗತ್ಯವಿದ್ದು, ಶೀಘ್ರವೇ ನೇಮಕ ಮಾಡಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದು ಉಚಿತ ಕೋಚಿಂಗ್ ಉದ್ಘಾಟನಾ ಸಮಯದಲ್ಲಿ ವಿದ್ಯಾರ್ಥಿಯೊಬ್ಬ ಹೇಳಿದ್ದ ಮಾತಿಗೂ ಪ್ರತಿಕ್ರಿಯೆ ನೀಡಿದ್ದಾರೆ. ಆ ರೀತಿ ಮಾತಾಡಿದ್ದ ವಿದ್ಯಾರ್ಥಿ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ. ಅದನ್ನು ಇಂಗ್ಲೀಷ್ ನಲ್ಲಿಯೇ ಹೇಳಿರುವುದು ವಿಪರ್ಯಾಸವೇ ಸರಿ.
ಸದ್ಯ ಅದೆಲ್ಲವನ್ನು ಪಕ್ಕಕ್ಕೆ ಇಟ್ಟು ನೋಡಿದರು, ಶಿಕ್ಷಕ ವೃತ್ತಿಗಾಗಿ ಹಗಲು ರಾತ್ರಿ ಕಷ್ಟ ಪಟ್ಟು ಕಾಯುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಾವೂ ಶಿಕ್ಷಕರೇ ಆಗಬೇಕು ಎಂದುಕೊಂಡವರು ಈಗಿನಿಂದಾನೇ ಪರೀಕ್ಷೆಗಳಿಗೆ ತಯಾರಿ ನಡೆಸುವುದು ಸೂಕ್ತವಾಗಿದೆ. ನೇಮಕಾತಿ ಪ್ರಕ್ರಿಯೆ ಶುರುವಾದಾಗ ಪರೀಕಗಷೆ ಬರೆಯುವುದಕ್ಕೆ, ಸಂದರ್ಶನ ಅಟೆಂಡ್ ಮಾಡುವುದಕ್ಕೆ ಸುಲಭವಾಗುತ್ತದೆ. ಶೀಘ್ರದಲ್ಲಿಯೆ ಖಾಲಿ ಒರುವ ವಿಷಯಗಳಿಗೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇದು ಹಲವು ಅಭ್ಯರ್ಥಿಗಳಿಗೆ ಖುಷಿ ನೀಡಿದೆ.