ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು, ಜುಲೈ 26: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ. ಹಾವೇರಿಯಲ್ಲಿ 87% ಬಿತ್ತನೆಯಾಗಿದೆ ಎಂದರು.
ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ, ಪರಿಶೀಲನೆ :
ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ :
ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದರು.
ಅಮಾಯಕರ ಮೇಲಿನ ಕೇಸ್ ವಾಪಸ್
ಡಿ.ಜೆ.ಹಳ್ಳಿ ಹಾಗೂ ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಅಮಾಯಕರ ಮೇಲಿನ ಕೇಸ್ ಹಿಂಪಡೆಯುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಏಕೆ ಹಿಂಪಡೆಯಲಿಲ್ಲ ಎಂದರು.
ಶಾಸಕರ ಹೆಸರಿನಲ್ಲಿ ನಕಲಿ ಪತ್ರ
ಶಾಸಕರು ಸಚಿವರ ಮೇಲೆ ದೂರು ನೀಡಿ ಮುಖ್ಯ ಮಂತ್ರಿಗಳಿಗೆ ಬರೆದಿದ್ದಾರೆ. ಈ ಎನ್ನಲಾದ ಪತ್ರವನ್ನು ಶಾಸಕ ಬಿ.ಆರ್.ಪಾಟೀಲ್ ಅವರೇ ನಕಲಿ ಪತ್ರ ಎಂದು ಹೇಳಿದ್ದಾರೆ. ಆದರೂ ಪತ್ರಿಕೆಗಳಲ್ಲಿ ಪ್ರಚಾರ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಬರೆದಿದ್ದಾರೆ. ಇಂಥ ಮಂತ್ರಿ ಎಂದು ಹೆಸರಿಸಿಲ್ಲ ಎಂದರು.
ಕಾರ್ಗಿಲ್ ಯೋಧರ ಬದುಕು ಯುವಕರಿಗೆ ಸ್ಫೂರ್ತಿ
ಕಾರ್ಗಿಲ್ ಯುದ್ಧದಲ್ಲಿ ಸುಮಾರು 524 ಯೋಧರು ದುರ್ಗಮ ಸ್ಥಳದಲ್ಲಿ ಹೋರಾಡಿ ದೇಶವನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ. ತ್ಯಾಗ, ಬಲಿದಾನ ಮಾಡಿದ ಎಲ್ಲರ ಆತ್ಮಕ್ಕೆ ಶಾಂತಿ ಕೋರಿ ಸ್ಮರಿಸುವುದು ನಮ್ಮ ಕರ್ತವ್ಯ. ಅವರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನ ನೀಡುವಂಥದ್ದು ಎಂದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್