Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದೊಡ್ಡಸಿದ್ದವ್ವನಹಳ್ಳಿಯ ಜ್ಞಾನಪೂರ್ಣ ಶಾಲೆಗೆ ಉತ್ತಮ ಫಲಿತಾಂಶ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 03 : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಆಶಾಕಿರಣ ಎಂದೇ ಖ್ಯಾತಿ ಪಡೆದಿರುವ ತಾಲೂಕಿನ, ದೊಡ್ಡ ಸಿದ್ದವ್ವನ ಹಳ್ಳಿಯ ಜ್ಞಾನಪೂರ್ಣ ಶಾಲೆ 2024- 25 ನೇ ಸಾಲಿನಲ್ಲಿ ನಡೆದ SSLC ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದಿದೆ.

ವಿದ್ಯಾರ್ಥಿನಿ ಕು. ಅನನ್ಯ ಪಾಟೀಲ್ ಶೇಕಡ 97.60% ಅಂಕಗಳಿಸಿ, ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿ, ಕೀರ್ತಿಯನ್ನು ತಂದಿರುತ್ತಾರೆ. ಕು. ಮೇಘಶ್ರೀ ರವರು ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿರುತ್ತಾರೆ ಮತ್ತು ಶೇ 95.36 ಅಂಕಗಳನ್ನು ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಕು. ಮೋನಿಕಾ. ಡಿ ರವರು ಶೇ 93.44 ಅಂಕಗಳನ್ನು ಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ :
1) ಅನನ್ಯ ಪಾಟಿಲ್ ಡಿ.ಎಲ್. 610 – 97.60%
2) ಮೇಘಶ್ರೀ ಕೆ. 596 – 95.36 %
3) ಮೋನಿಕಾ ಡಿ. 584 – 93.44%
4) ಲಕ್ಷ್ಮೀ ಎಂ. 581 – 92.96 %
5) ಭುವನ ಪಿ. 580 – 92.80 %
6) ಪ್ರತಿಭಾ ಓ. 577 – 92.32 %
7) ಲಿಖಿತಾ ಎನ್. 565 – 90.40 %
8) ಲಕ್ಷೀ ಎಸ್. 561 – 89 76 %

ಒಟ್ಟಾರೆಯಾಗಿ ಜ್ಞಾನಪೂರ್ಣ ಶಾಲೆಯು 28 ಅತ್ಯುನ್ನತ ದರ್ಜೆ (ಡಿಸ್ಟಿಂಕ್ಷನ್ಸ್), 33 ಪ್ರಥಮ ದರ್ಜೆ, ಹಾಗೂ 8 ದ್ವಿತೀಯ ದರ್ಜೆಗಳೊಂದಿಗೆ ಉತ್ತಮ ಫಲಿತಾಂಶವನ್ನು ಪಡೆದಿದೆ. ಉತ್ತಮ ಫಲಿತಾಂಶ ಪಡೆದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಮತ್ತು ಶಿಕ್ಷಕರ ವೃಂದ ಅಭಿನಂದಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...