Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಸರ್ಕಾರಿ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ಅಸ್ತು

---Advertisement---

ಸುದ್ದಿಒನ್,ಬೆಂಗಳೂರು,ಮೇ.22: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಕುರಿತು ಕರ್ನಾಟಕ ಸರ್ಕಾರವು ಮಹತ್ವದ ನಡವಳಿಗಳನ್ನು ಹೊರಡಿಸಿದೆ.

2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಒಟ್ಟು 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿತ್ತು.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಿ ಅದರಂತೆ ಹೊಸ ಆದೇಶವನ್ನು ಹೊರಡಿಸಿದೆ.

2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿದೆ. ಈ ಅನುಮೋದನೆಯ ಪ್ರಕಾರ ಪ್ರಾಥಮಿಕ ಶಾಲೆಗಳಿಗೆ 40,000 ಅತಿಥಿ ಶಿಕ್ಷಕರು ಹಾಗೂ ಪ್ರೌಢಶಾಲೆಗಳಿಗೆ 11,000 ಅತಿಥಿ ಶಿಕ್ಷಕರು ಸೇರಿದಂತೆ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸಹಮತಿಸಲಾಗಿದೆ.

ಮುಂದುವರೆದು, 2026-27ನೇ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳಲಾಗುವ ಈ ಒಟ್ಟು 51,000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರುಗಳ ಜಿಲ್ಲಾ ಮತ್ತು ತಾಲ್ಲೂಕುವಾರು ವಿವರಗಳೊಂದಿಗಿನ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖೆಗೆ ಸೂಚಿಸಲಾಗಿದೆ.

Join WhatsApp

Join Now

Join Telegram

Join Now