ಬೆಂಗಳೂರು: ಕಳೆದ ಕೆಲವು ದಿನಗಳಿಂದ ಪಿಎಸ್ಐ ಪರೀಕ್ಷೆ ಅಕ್ರಮದ ಬಗ್ಗೆ ಸಾಕಷ್ಟು ಸುದ್ದಿಯಾಗಿತ್ತು. ಸಿಐಡಿ ಇದರ ತನಿಖೆ ನಡೆಸಿ, ಹಲವರನ್ನು ಅರೆಸ್ಟ್ ಕೂಡ ಮಾಡಿತ್ತು. ಇಂದು ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಅರೆಸ್ಟ್ ಮಾಡಲಾಗಿದೆ. ಈ ಬೆನ್ನಲ್ಲೇ ನೇಮಕಾತಿ ರದ್ದು ಪಡಿಸಿ, ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
202ರಲ್ಲಿ ನಡೆದಿದ್ದ ಪಿಎಸ್ಐ ಪರೀಕ್ಷೆಯಲ್ಲಿ 545 ಹುದ್ದೆಗಳ ನೇಮಕಾತಿ ನಡೆದಿತ್ತು. ಈ ಸಂಬಂಧ ಇಂದು ರದ್ದು ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಸಚಿವ ಆರಗ ಜ್ಞಾನೇಂದ್ರ, ಈ ಪರೀಕ್ಷೆ ಒಂದಕ್ಕಿಂತ ಹೆಚ್ಚು ಸೆಂಟರ್ ಗಳಲ್ಲಿ ಈ ರೀತಿ ಪರೀಕ್ಷೆಯಲ್ಲಿ ಅವ್ಯವಹಾರ ಆಗಿದೆ ಎಂಬುದು ಮನದಟ್ಟಾಗಿದೆ. ಈ ಹಿನ್ನೆಲೆ ಚರ್ಚೆ ಮಾಡಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ.
54,289 ಜನ ಪರೀಜ್ಷೆಗೆ ಕೂತಿದ್ದರೋ ಅವರಿಗೆ ಮಾತ್ರ ಇನ್ನೊಂದು ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಯಾರು ಆಪಾದನೆ ಹೊತ್ತಿದ್ದಾರೋ ಅವರನ್ನು ಹೊರತು ಪಡಿಸಿ ಇನ್ನುಳಿದವರಿಗೆ ಅವಕಾಶ ನೀಡಲಾಗುತ್ತದೆ. ಅಕ್ರಮದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ವಿಚಾರಣೆ ಮುಂದುವರೆಯುತ್ತಿದೆ ಎಂದಿದ್ದಾರೆ.