ಬೆಳಗಾವಿ : ಇಂದಿನಿಂದ 10 ದಿನಗಳ ಕಾಲ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದಲ್ಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಸರ್ಕಾರಿ ವೈದ್ಯರ ಬಗ್ಗೆ ಮಾತನಾಡಿದ್ದಾರೆ. ಸರ್ಕಾರಿ ವೈದ್ಯರು ಬೆಳಗ್ಗೆ ಆಸ್ಪತ್ರೆಗೆ ಬಂದು ಸಹಿ ಹಾಕ್ತಾರೆ. ಆದ್ರೆ ಆ ಬಳಿಕ ಅವರ ಖಾಸಗಿ ಆಸ್ಪತ್ರೆಗೆ ಹೋಗಿ ಡ್ಯೂಟಿ ಮಾಡ್ತಾರೆ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಸರ್ಕಾರಿ ವೈದ್ಯರು ರೋಗಿಗಳಿಗೆ ತಮ್ಮ ಖಾಸಗಿ ಆಸ್ಪತ್ರೆಗಳಿಗೆ ಬರುವಂತೆ ಸೂಚಿಸುತ್ತಾರೆ. ಇದಕ್ಕೆ ಸರ್ಕಾರದ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಲಕ್ಷ್ಮಣ ಸವದಿ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಧಾಕರ್, ಮುಂದಿನ ದಿನಗಳಲ್ಲಿ ಅಂಥಹ ವೈದ್ಯರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಗ್ರಾಮೀಣ ಪ್ರದೇಶದಲ್ಲಿ ಈ ರೀತಿ ಆಗುತ್ತಿಲ್ಲ. ಸರಿಯಾದ ರೀತಿಯಲ್ಲಿ ಹಾಜರಾತಿ ನಡೆಯುತ್ತಿದೆ. ಕೆಲವು ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿದ್ದುಕೊಂಡು ಖಾಸಗಿ ಆಸ್ಪತ್ರೆಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಡ್ಯೂಟಿ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲೆ ಇರಬೇಕು. ಕೆಲಸದ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದದ್ದು ತಿಳಿದರೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಇನ್ನು ಗ್ರಾಮೀಣ ಭಾಗದಲ್ಲಿ ಈ ರೀತಿ ಆಗುತ್ತಿಲ್ಲ. ಸರಿಯಾಗಿ ಕೆಲಸ ಮಾಡುತಚತಿದ್ದಾರೆ. ಬೆಳಗ್ಗೆ 10.30 ರಿಂದ ಸಂಜೆ 4 ರ ತನಕ ಆಸ್ಪತ್ರೆಯಲ್ಲೆ ಇರಬೇಕು. ಈ ವೇಳೆ ವೈದ್ಯರಿಗೆ ನೀಡಿರುವ ವಸತಿ ಗೃಹದಲ್ಲೇ ಇರಬೇಕು. ಅದನ್ನ ಮೀರಿದವರಿಗೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.