Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಓ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ, ಗಡಿಪಾರಿಗೆ ಸರ್ಕಾರಿ ನೌಕರರ ಸಂಘ ಆಗ್ರಹ

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ಫೆ.15) : ಚಳ್ಳಕೆರೆ ಇಓ ಮಡಗಿನ ಬಸಪ್ಪ ಅವರ ಮೇಲೆ ನಡೆಸಿರುವ ಹಲ್ಲೆ ಖಂಡಿಸಿ ಸರ್ಕಾರಿ ನೌಕರರ ಸಂಘದವರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೌಕರರ ಸಂಘ, ಕರ್ನಾಟಕ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ನೌಕರರ ಸಂಘಗಳಿಂದ ಬೃಹತ್ ಪ್ರತಿಭಟನೆ ಮೂಲಕ ನ್ಯಾಯಕ್ಕಾಗಿ ಹೋರಾಟ ಎಂದು ಘೋಷಣೆಗಳನ್ನು ಕೂಗಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಸರ್ಕಾರಿ ನೌಕರರ ಮೇಲೆ ಪದೇ ಪದೇ ಹಲ್ಲೆಗಳು ನಡೆಯುತ್ತಿದ್ದು ಸರ್ಕಾರಿ ನೌಕರರು ಕಾರ್ಯನಿರ್ವಹಿಸುವುದು ಕಷ್ಟವಾಗಿದೆ. ಜಿಲ್ಲಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲೂ ಸಹ ಲೋಪವಾಗದಂತೆ ಅವರಿಗೆ ಶಿಕ್ಷೆಗೆ ಒಳಪಡಿಸಬೇಕಿದೆ.

ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ  ಹಲ್ಲೆ ಮಾಡಿರುವ ಆರೋಪಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ,  ಇಂತಹ ಘಟನೆಗಳು ಮರು ಕಳಿಸದಂತೆ ಕಾನೂನು ಕ್ರಮ ಜರುಗಿಸಿ ಅಧಿಕಾರಿಗಳು ಶಾಂತಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಮನವಿ ಮಾಡಿದ್ದಾರೆ.

ಇಓ ರವರ ಮೇಲೆ ಹಲ್ಲೆ ಮಾಡಿದ ಚುನಾಯಿತ  ಪ್ರತಿನಿಧಿಗಳು ಮುಂದಿನ ದಿನದಲ್ಲಿ ಚುನಾವಣೆಗೆ ಸ್ಫರ್ದೆ ಮಾಡದಂತೆ ಆದೇಶವನ್ನು ನೀಡಬೇಕಿದೆ. ಇಂದಿನ ದಿನಮಾನದಲ್ಲಿ ಸರ್ಕಾರಿ ನೌಕರರು ಶಾಂತಿಯಿಂದ ಕೆಲಸವನ್ನು ಮಾಡುವಂತ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ ಈ ರೀತಿಯಾದ ಹಲ್ಲೆಯನ್ನು ಮಾಡುವವರನ್ನು ಶಿಕ್ಷೆಗೆ ಒಳಪಡಿಸಬೇಕಿದೆ ಎಂದು ಮಂಜುನಾಥ್ ಒತ್ತಾಯಿಸಿದರು.

ಕರ್ನಾಟಕ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಮಾತನಾಡಿ, ಕುಲಕ್ಷ ಕಾರಣಕ್ಕಾಗಿ ಚಳ್ಳಕೆರೆ ಇಓ ಮೇಲೆ ಪಂಚಾಯಿತಿಯ ಚುನಾಯಿತ ಪ್ರತಿನಿಧಿಯೊರ್ವರು ಹಲ್ಲೆ ಮಾಡಿದ್ದಾರೆ. ಇವರ ಅಪರಾಧವನ್ನು ಯಾವುದೇ ಒತ್ತಡಕ್ಕೂ ಮಣೀಯದೆ ಅವರನ್ನು ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಿದೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವವರೆಗೂ ನಮ್ಮ ಹೋರಾಟವನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ, ಪಂಚಾಯಿತಿಯ ಕೆಲಸವನ್ನು ಬಹಿಷ್ಕಾರ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

ಪಂಚಾಯಿತಿ ಎಂದ ಮೇಲೆ ವಾಟಾರ್‍ಮಾನ್‍ನಿಂದ ಹಿಡಿದು ಇಓವರೆಗೂ ಬರುತ್ತಾರೆ. ಕೆಲಸ ಮಾಡುವವರ ಮೇಲೆ ಈ ರೀತಿಯಾದ ಹಲ್ಲೆ ನಡೆದರೇ ಹೇಗೆ, ಹಲ್ಲೆ ಮಾಡಿದವರನ್ನು ಗೊಂಡಾ ಕಾಯ್ದೆಯಡಿ ಜಾರಿ ಮಾಡಿ ಬಂಧಿಸಬೇಕಿದೆ. ಮುಂದಿನ ದಿನಮಾನದಲ್ಲಿ ಈ ರೀತಿಯಾದ ಪ್ರಕರಣಗಳು ಆಗದಂತೆ ತಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕಿದೆ. ರಾಜ್ಯದಲ್ಲಿ ಪ್ರತಿ ದಿನ ಈ ರೀತಿಯಾದ ಹಲ್ಲೆಗಳು ನಿರಂತರವಾಗಿ ನಡೆಯುತ್ತಿದೆ. ಇಲ್ಲಿ ಕೆಲವು ಮಾತ್ರ ಪೋಲಿಸ್ ಠಾಣೆಯಲ್ಲಿ ನೊಂದಾಣಿಯಾಗುತ್ತದೆ ಉಳಿದವೂ ನೊಂದಾಣಿಯಾಗದೇ ಇರುವ ಪ್ರಕರಣಗಳು ಹಲವಾರು ಇವೆ. ಇಓ ಮೇಲೆ ಹಲ್ಲೆ ಮಾಡಿದಂತ ಚುನಾಯುತ ಪ್ರತಿನಿಧಿಯ ಕೆಡಿಪಿ ಸದಸತ್ವನ್ನು ಈ ಅಧಿವೇಶನದಲ್ಲಿಯೇ ರದ್ದು ಮಾಡುವಂತ ಆದೇಶವನ್ನು ಸರ್ಕಾರ ಹೊರಡಿಸಬೇಕಿದೆ ಹಾಗೇಯೇ ಅವರ ಮೇಲೆ ರೌಡಿ ಶೀಟರ್‍ನ್ನು ಜಾರಿ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!