Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರೈತರ ಹಿತ ಕಾಯುವಲ್ಲಿ ಸರ್ಕಾರ ವಿಫಲ : ನಿಖಿಲ್ ವಾಗ್ದಾಳಿ

---Advertisement---

 

ಹಿರಿಯೂರು, ಆಗಸ್ಟ್. 03 : ಕಾಂಗ್ರೆಸ್ ಸರ್ಕಾರ ಕೊಟ್ಟ ಯಾವ ಮಾತನ್ನೂ ಕರಾರುವಕ್ಕಾಗಿ ಈಡೇರಿಸಿಲ್ಲ. ಚಿತ್ರದುರ್ಗ ಜಿಲ್ಲೆ ಸಂಪೂರ್ಣ ನೀರಾವರಿ ಪ್ರದೇಶವಾಗಲು ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಹರಿಯಬ್ಬೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚಿನ ಕಾರ್ಯಕರ್ತರು ಈ ತಾಲೂಕಿನಲ್ಲಿ ನಮಗಿದ್ದಾರೆ. ಗೊಂದಲ ಮಾಡಿಕೊಳ್ಳದೆ ಕಾರ್ಯಪ್ರವೃತ್ತರಾದರೆ ಇಲ್ಲಿ ನಮ್ಮನ್ನು ತಡೆಯುವುದು ಯಾರಿಂದಲೂ ಆಗುವುದಿಲ್ಲ. ಭದ್ರಾ ಯೋಜನೆ ಮೊದಲ ಹಂತದ ಕಾಮಗಾರಿಗೆ ಚಾಲನೆ ಕೊಟ್ಟದ್ದೇ ಕುಮಾರಸ್ವಾಮಿಯವರು. ಜಿಲ್ಲೆಯ ರೈತರು ಕಷ್ಟಜೀವಿಗಳು ಸ್ವಾಭಿಮಾನಿಗಳಿದ್ದು ಈಗಿನ ಸರ್ಕಾರ ನಿಮಗೇನು ಕೊಟ್ಟಿದೆ ಎಂಬುದನ್ನು ಅವಲೋಕನ ಮಾಡಿಕೊಳ್ಳಿ.ಇಷ್ಟು ಬೇಗ ರಾಜ್ಯದಲ್ಲಿ ಪ್ರವಾಸಗಳನ್ನು ಕೈ ಗೊಂಡಿರುವುದರಲ್ಲಿ ನನ್ನ ಸ್ವಾರ್ಥ ಏನೂ ಇಲ್ಲ. ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಕಟ್ಟಲು ತಯಾರಿ ನಡೆಸಲಾಗಿದೆ. ಅಲ್ಪ ಅಧಿಕಾರದ ಅವಧಿಯಲ್ಲಿ ಹೆಚ್ಚಿನ ಕಾರ್ಯಕ್ರಮ, ಯೋಜನೆಗಳನ್ನು ಕುಮಾರಸ್ವಾಮಿಯವರು ನೀಡಿದ್ದಾರೆ. ಬಿಜೆಪಿ ವರಿಷ್ಟರ ಆಸೆಯಂತೆ ಕುಮಾರಸ್ವಾಮಿ ಎಂಪಿ ಚುನಾವಣೆಗೆ ಸ್ಪರ್ಧಿಸಿ ಚುನಾವಣೆಯಲ್ಲಿ ಗೆದ್ದು ಮಂತ್ರಿಯಾಗಿದ್ದಾರೆ ಎಂದರು.

ಜೆಡಿಎಸ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರವೀಂದ್ರಪ್ಪ ಮಾತನಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ಹುಮ್ಮಸ್ಸು ಕಾರ್ಯಕರ್ತರಲ್ಲಿದೆ. ನಾವು ನಾಲ್ಕು ಬಾರಿ ಚುನಾವಣೆ ಸೋತಿದ್ದೇವೆ. ಕಾರಣ ಹುಡುಕಬೇಕಿದೆ. ನಮ್ಮಲ್ಲಿ ಇರುವಷ್ಟು ಪ್ರಾಮಾಣಿಕ ಕಾರ್ಯಕರ್ತರು ಬೇರಾವ ಪಕ್ಷದಲ್ಲೂ ಇಲ್ಲ. ಬರುವ ಚುನಾವಣೆಯಲ್ಲಿ ನಾವು ಜೆಡಿಎಸ್ ಪಕ್ಷದ ಶಾಸಕರನ್ನು ನೋಡಲೇಬೇಕು. ಎಲ್ಲಾ ಕಾರ್ಯಕರ್ತರು ಸೈನಿಕರಂತೆ ಕೆಲಸ ಮಾಡಿ ಪಕ್ಷ ಕಟ್ಟಬೇಕು. ನಿಖಿಲ್ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಬರಲಿರುವ ಎಲ್ಲಾ ಚುನಾವಣೆ ಎದುರಿಸೋಣ ಎಂದರು.

ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ ಯಶೋಧರ್, ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ, ವಕೀಲ ಶಿವಶಂಕರ್ ಮುಂತಾದವರು ಮಾತನಾಡಿದರು.

ಈ ಸಂದರ್ಭದಲ್ಲಿ ವಿಪ ಮಾಜಿ ಸದಸ್ಯ ತಿಪ್ಪೇಸ್ವಾಮಿ,ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಮಾಜಿ ಜಿಪಂ ಸದಸ್ಯ ಎಸ್ ಆರ್ ಗೌಡ, ಕಲ್ಲೇ ರುದ್ರೇಶ್,ಕನ್ಯಾಕುಮಾರಿ, ಬಸವರಾಜ್, ಜೆಜೆ ಹಳ್ಳಿ ಮಂಜಣ್ಣ, ಶಂಕರಮೂರ್ತಿ, ಉಗ್ರೇಶ್,ಸಿ ನಾಗರಾಜಪ್ಪ, ಶಿರಾ ಜೆಡಿಎಸ್ ಅಧ್ಯಕ್ಷ ಸತ್ಯಪ್ರಕಾಶ್ ಮುಂತಾದವರು ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...