Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಯೂರಿಯಾ ಪೂರೈಸುವಲ್ಲಿ ಸರ್ಕಾರ ವಿಫಲ : ಕೆ ಅಭಿನಂದನ್

---Advertisement---

ಹಿರಿಯೂರು, ಸೆಪ್ಟೆಂಬರ್.03 :  ತಾಲ್ಲೂಕಿನಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡುತ್ತಿದ್ದು, ಅಂಗಡಿ ಮುಂಭಾಗದಲ್ಲಿ ಒಂದು ಚೀಲ ಗೊಬ್ಬರಕ್ಕೆ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದ್ದು ಅಧಿಕಾರಿಗಳು ರೈತರ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಬಿಜೆಪಿ ತಾಲೂಕ ಅಧ್ಯಕ್ಷಕ್ಕೆ ಅಭಿನಂದನ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ತಾಲೂಕಿನಲ್ಲಿ ಇತ್ತಿಚೆಗಷ್ಟೇ ಸುರಿದ ಮಳೆಯಿಂದ ತೇವಾಂಶ ಹೆಚ್ಚಿದೆ. ಬೆಳೆಗಳಿಗೆ ರೋಗ ಬಾಧಿಸುತ್ತಿದೆ ರೋಗ ನಿಯಂತ್ರಣಕ್ಕಾಗಿ ರೈತರು ಗೊಬ್ಬರ ಮೊರೆ ಹೋಗುತ್ತಿದ್ದಾರೆ. ಏಕೈಕ ಚೀಲ ಗೊಬ್ಬರ ಕೊಳ್ಳಲು ಅಂಗಡಿ ಮುಂದೆ ಕಾಯುವ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಯೂರಿಯಾ ಗೊಬ್ಬರ ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದರು.

ಒಂದು ಅಥವಾ ಎರಡು ಲಾರಿ ಯೂರಿಯಾ ಬಂದಿರುವುದನ್ನು ತಿಳಿದ ರೈತರು ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದು ಮಳೆ, ಗಾಳಿ ಎನ್ನದೇ ಬೆಳ್ಳಂ ಬೆಳಿಗ್ಗೆಯೇ ರೈತರು ಬಂದು ನಗರದ ಸುಗ್ಗಿ ಟ್ರೇಡರ್ಸ್ ಹಾಗೂ ಇನ್ನಿತರ ಅಂಗಡಿಗಳ ಮುಂದೆ ನಿಲ್ಲುತ್ತಿದ್ದು, ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ. ಜೊತೆಗೆ ಕ್ಷೇತ್ರದ ಸಚಿವರು ಕೂಡ ರೈತರಿಗೆ ಗೊಬ್ಬರ ಪೂರೈಕೆ ಮಾಡುವಲ್ಲಿ ಅಸಡ್ಡೆ ತೋರಿದ್ದಾರೆ. ಜೊತೆಗೆ ಕೃಷಿ ಸಚಿವರ ಜೊತೆ ಮಾತಾಡಿ ಹೆಚ್ಚು ಗೊಬ್ಬರವನ್ನು ಕ್ಷೇತ್ರಕ್ಕೆ ತರಿಸಿಕೊಳ್ಳುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲವಾಗಿದ್ದಾರೆ ಎಂದು ಕಿಡಿಕಾರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment