ಚಳ್ಳಕೆರೆ, (ಏ.21) : ಮುರಾರ್ಜಿ ಶಾಲೆಗೆ ಸೇರಿದ್ದ 1ಎಕರೆ 24 ಗುಂಟೆ ಪ್ರದೇಶವನ್ನು ಅತಿಕ್ರಮಿಸಿಕೊಂಡಿದ್ದವರಿಂದ ತಹಶೀಲ್ದಾರ್ ಎನ್. ರಘುಮೂರ್ತಿ ಅವರು ಪುನಃ ಸರ್ಕಾರದ ಸ್ವಾಧೀನಕ್ಕೆ ಪಡೆದಿದ್ದಾರೆ.
ತಾಲೂಕು ಕಸಬಾ ಹೋಬಳಿ ಬುಡ್ನಹಟ್ಟಿ ಗ್ರಾಮದ ಸರ್ವೇ ನಂಬರ್ 73 ರಲ್ಲಿ ಒಂದು ಎಕರೆ 24 ಗುಂಟೆ ಸರ್ಕಾರಿ ಜಮೀನು ವಶಕ್ಕೆ ಪಡೆಯಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಮುರಾರ್ಜಿ ಶಾಲೆಗೆ ಸೇರಿದ್ದ ಒಂಬತ್ತು ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿತ್ತು.
ಗ್ರಾಮದ ಚಂದ್ರಶೇಖರ್ ನಾಯಕ ಎಂಬಾತ, 9 ಎಕರೆ ಜಮೀನಿನಲ್ಲಿ 1ಎಕರೆ 24 ಗುಂಟೆ ಪ್ರದೇಶವನ್ನು ಅತಿಕ್ರಮಿಸಿಕೊಂಡು, ಶಾಲೆಯ ಕಾಮಗಾರಿ ಕೆಲಸಕ್ಕೆ ಅಡ್ಡಿಪಡಿಸಿರುತ್ತಾರೆ. ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳಿಗೆ ತಲೆನೋವಾಗಿ ಸಂಭವಿಸಿದ್ದು ಆರು ತಿಂಗಳುಗಳಿಂದ ಈ ಕಾಮಗಾರಿ ಪ್ರಾರಂಭಿಸಲು ಅಡ್ಡಿಯಾಗಿತ್ತು.
ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎನ್. ರಘುಮೂರ್ತಿ ಅವರು ಸರ್ವೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳೊಂದಿಗೆ ತೆರಳಿ ಒತ್ತುವರಿಯಾಗಿರುವ ಪ್ರದೇಶವನ್ನು ಸರ್ಕಾರದ ವಶಕ್ಕೆ ಪಡೆದು ಸಂಖ್ಯಾತರ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿ ಅಲ್ಲಿ ಟ್ರೆಂಚ್ ಹೊಡಿಸುವ ಮುಖಾಂತರ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು. ಇದರಿಂದ ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಶಾಲೆಯ ಕಾಮಗಾರಿ ಆರಂಭವಾದಂತಾಗಿದೆ.
ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ಲಿಂಗೇಗೌಡ, ತಾಲೂಕು ಸರ್ವೆ ಅಧಿಕಾರಿ ಪ್ರಸನ್ನಕುಮಾರ್, ಅಲ್ಪಸಂಖ್ಯಾತರ ಇಲಾಖೆಯ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…