Connect with us

Hi, what are you looking for?

ಪ್ರಮುಖ ಸುದ್ದಿ

ಮಾರಕ ರೋಗದ ಬಗ್ಗೆ ಸರ್ಕಾರಕ್ಕೇಕೆ ಇಷ್ಟು ಆಲಸ್ಯ..? : ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಲಷ್ಟವೇ ಕಡಿಮೆಯಾಗುತ್ತಿಲ್ಲ. ಇದರ ಜೊತೆಗೆ ಬ್ಲ್ಯಾಕ್ ಫಂಗಸ್ ದೊಂದು ಸಂಕಟ ಬಂದೊದಗಿದೆ. ಈ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದ್ದು, ಒಂದಷ್ಟು ಪ್ರಶ್ನೆಗಳನ್ನ ಕೇಳಿದ್ದಾರೆ.

ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ Amphotericin B ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. ‘ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಅತ್ತ, ಇತರ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ‘ರಾಕ್ಷಸ ಅಲಸ್ಯ’ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ Amphotericin B ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ. ಮತ್ತು, ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ?.

ಮುಂದಿನ ದಿನಗಳಲ್ಲಿ ಪ್ರತಿ ವಾರ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ಗುರಿಯಾಗುವುದಾಗಿ ತಜ್ಞರು ಹೇಳಿದ್ದಾರೆ. ಈ ಸಂಖ್ಯೆ ಹೆಚ್ಚಲೂಬಹುದು. ಗಮನಿಸಬೇಕಾದ್ದೇನೆಂದರೆ, ಈ ಕಾಯಿಲೆಗೆ ಮೊದಲ 2 ದಿನಗಳಲ್ಲೇ ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದರೆ, ಸಾವು ತರುವ ರೋಗವಾಗಿ ಇದು ಪರಿಣಮಿಸುತ್ತದೆ. ಆದರೆ, ರಾಜ್ಯ ಸರ್ಕಾರ ಔಷಧ ಹೊಂದಿಸಿದೆಯೇ?

ಆಕ್ಸಿಜನ್‌, ಲಸಿಕೆಗಾಗಿ ಕೇಂದ್ರದತ್ತ ನೋಡಿದ ರಾಜ್ಯ ‘ಇಲ್ಲ’ ಎನಿಸಿಕೊಂಡಿದೆ. ಅದರ ಪರಿಣಾಮ ಜನರು ಅನುಭವಿಸುತ್ತಿದ್ದಾರೆ. ಈಗ ಕಪ್ಪು ಶಿಲೀಂಧ್ರದ ವಿಚಾರದಲ್ಲೂ ರಾಜ್ಯ ಸರ್ಕಾರ ಆಲಸ್ಯದಿಂದ ಕೇಂದ್ರದ ಕಡೆ ನೋಡುತ್ತಿದೆ. ಈಗಲೂ ಕೇಂದ್ರ ಇಲ್ಲ ಎಂದಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಾದರೂ ಸ್ವತಂತ್ರ ನಿರ್ಧಾರ ಕೈಗೊಳ್ಳಲಿ. ಜನರ ಜೀವ ಉಳಿಸಲಿ.

ಕೇಂದ್ರ ಸದಾ ತಾರತಮ್ಯ ಮಾಡುತ್ತದೆ. ಉದಾ: ರಾಜ್ಯದಲ್ಲಿ ಒಬ್ಬ ಕೋವಿಡ್‌ ರೋಗಿಗೆ ಲಭ್ಯವಿರುವ ಆಮ್ಲಜನಕ 1.90 ಲೀಟರ್‌. ಗುಜರಾತ್‌ನಲ್ಲಿ ಪ್ರತಿ ರೋಗಿಗೆ 10.95 ಲೀಟರ್‌ ಸಿಗುತ್ತಿದೆ. ಆದರೆ, ಅಲ್ಲಿಗಿಂತ ಹೆಚ್ಚು ಪ್ರಕರಣಗಳಿರುವುದು ನಮ್ಮಲ್ಲಿ. ಇದು ಕೇಂದ್ರದ ಆಕ್ಸಿಜನ್‌ ಮೋಸ. ಕಪ್ಪು ಶಿಲೀಂದ್ರ ಔಷಧದಲ್ಲೂ ಇದು ಮುಂದುವರಿಯುತ್ತಿದೆ.

ರಾಜ್ಯದ ಬಿಜೆಪಿ ಸರ್ಕಾರವು ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ, ತಾನೇ ನಿರ್ಧಾರಗಳನ್ನು ಕೈಗೊಳ್ಳಲಿ. ಔಷಧಕ್ಕಾಗಿ ಪರ್ಯಾಯ ಮೂಲಗಳನ್ನು ಹುಡಕಲಿ. ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!