Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಟ್ಟದನಾಗೇನಹಳ್ಳಿಯಲ್ಲಿ ಸರ್ಕಾರಿ ಮಾಂಟೇಸ್ಸರಿ ಪ್ರಾರಂಭೋತ್ಸವ : ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

---Advertisement---

ಚಿತ್ರದುರ್ಗ. ಜ.22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಭರಮಸಾಗರ ಶಿಶು ಅಭಿವೃದ್ಧಿ ಯೋಜನೆಯ ಭೀಮಸಮದ್ರ ವೃತ್ತದ ಬೆಟ್ಟದನಾಗೇನಹಳ್ಳಿ-ಬಿ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ‘ಸರ್ಕಾರಿ ಮಾಂಟೇಸ್ಸರಿ-ಎಲ್ ಕೆ ಜಿ ಮತ್ತು ಯು ಕೆ ಜಿ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

 

ಈ ವಿಶೇಷ ಸಂದರ್ಭದಲ್ಲಿ ಕೆನಡಾದಲ್ಲಿ ವಿಜ್ಞಾನಿಯಾಗಿರುವ, ದಾನಿಗಳಾದ ಡಾ. ಪಿ. ಮಂಜುನಾಥ್ ಅವರ ಸಹೋದರ ಪಿ. ಜಗದೀಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಗ್ರಾಮದ ಎ ಮತ್ತು ಬಿ ಎರಡು ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಾದ ಅಲ್ಮೇರ, ರ್ಯಾಕ್ ಹಾಗೂ ಟೇಬಲ್‍ಗಳನ್ನು ಕೊಡುಗೆಯಾಗಿ ನೀಡಿದರು. ಅಷ್ಟೇ ಅಲ್ಲದೆ, ಕೇಂದ್ರದ ಮಕ್ಕಳಿಗೆ ಮಿನಿ ಚೇರ್, ಟೇಬಲ್‍ಗಳು,, ಸಮವಸ್ತ್ರ, ಶೂ-ಸಾಕ್ಸ್, ನೋಟ್‍ಬುಕ್ ಹಾಗೂ ಸ್ಕೂಲ್ ಬ್ಯಾಗ್‍ಗಳನ್ನೊಳಗೊಂಡ ಕಲಿಕಾ ಸಾಮಾಗ್ರಿ ವಿತರಿಸಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದರು.

 

ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಚಕ್ಕಣ್ಣನವರ್ ಮಾತನಾಡಿ, ಸರ್ಕಾರಿ ಮಾಂಟೇಸ್ಸರಿ ಸೌಲಭ್ಯವನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿಯರಾದ ಜಾಹೆದಾ ಬೇಗಂ, ಬಿ. ಜೈತುನ್, ಪುಷ್ಪ, ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್, ಶಾಲಾ ಮುಖ್ಯ ಶಿಕ್ಷಕರಾದ ನಾಗರಾಜಪ್ಪ, ತಿಮ್ಮಣ್ಣ, ಭೀಮಸಮದ್ತ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಊರಿನ ಗ್ರಾಮಸ್ಥರು, ಮಕ್ಕಳ ಫೋಷಕರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now