ಬೆಂಗಳೂರು: ಬಿಕೆ ಹರಿಪ್ರಸಾದ್ ಬಳಿಕ ಇದೀಗ ಈಡಿಗ ಸಮುದಾಯದ ಪ್ರಣಾವನಂದ ಸ್ವಾಮೀಜಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೇವಲ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಂದ ಮಾತ್ರ ಸರ್ಕಾರ ಬಂದಿಲ್ಲ. ಹರಿಪ್ರಸಾದ್ ಕೂಡ ರಾಜ್ಯಾದ್ಯಂತ ಪ್ರವಾಸ ಮಾಡಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ. ಕೆಲಸ ಮಾಡಿದ್ದಾರೆ. ಅವರು ಕೂಡ ಸಿಎಂ ಆಗುವ ಅರ್ಹತೆಯನ್ನು ಹೊಂದಿದ್ದಾರೆ.
ಹರಿಪ್ರಸಾದ್ ಅವರನ್ನು ವಲಸಿಗರು ತುಳಿದಿಲ್ಲ. ಹೊರಗಡೆಯಿಂದ ಬಂದವರು ತುಳಿಯುತ್ತಿದ್ದಾರೆ. ನಮ್ಮ ಸಮುದಾಯವನ್ನು ಹೇಗೆ ಬೇಕೋ ಹಾಗೇ ಬಳಸಿಕೊಳ್ಳುತ್ತಿದ್ದಾರೆ. ನಮ್ಮದು ಅತಿ ದೊಡ್ಡ ಸಮುದಾಯ. ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಈಡಿಗರ ಸಮಾವೇಶದಲ್ಲಿ ಒಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲು ಗೊತ್ತು, ಅದೇ ವ್ಯಕ್ತಿಯನ್ನು ಕಳಗೆ ಇಳಿಸೋದು ಗೊತ್ತು ಅನ್ನೋ ಮೂಲಕ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಮುಖ್ಯಂತ್ರಿ ಸಿದ್ದರಾಮಯ್ಯಗೆ ಪರೋಕ್ಷವಾಗಿ ಎಚ್ಚರಿಕೆಯನ್ನು ನೀಡಿದ್ದರು. ಹರಿಪ್ರಸಾದ್ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











