Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್, ಚಪ್ಪಲಿ ವಿತರಣೆಗೆ ಸರ್ಕಾರ ಆದೇಶ

---Advertisement---

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಶೂ, ಸಾಕ್ಸ್ ಹಾಗೂ ಚಪ್ಪಲಿಗಳನ್ನು ಯಾವುದೇ ಗೊಂದಲವಿಲ್ಲದೆ ತಲುಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯ ಮಟ್ಟದಲ್ಲಿ ಯಶಸ್ವಿಯಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಸರಬರಾಜು ಮಾಡುವಂತೆ ಗುತ್ತಿಗೆದಾರರಿಗೆ ಆದೇಶ ನೀಡಲಾಗಿದೆ. ಇಲಾಖೆಯ ಹೆಮ್ಮೆಯ ಯೋಜನೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಪ ನಿರ್ದೇಶಕರು (ಆಡಳಿತ), ತಾಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಮತ್ತು ಶಾಲಾ ಮಟ್ಟದಲ್ಲಿ ಮುಖ್ಯ ಶಿಕ್ಷಕರಿಗೆ ವಹಿಸಲಾಗಿದೆ.

SATS ತಂತ್ರಾಂಶದಲ್ಲಿ ಲಭ್ಯವಿರುವ ವಿದ್ಯಾರ್ಥಿಗಳ ಸಂಖ್ಯೆಯ ಆಧಾರದ ಮೇಲೆ ಸರಬರಾಜುದಾರರು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೇರವಾಗಿ ಶೂ, ಸಾಕ್ಸ್ ಹಾಗೂ ಚಪ್ಪಲಿಗಳನ್ನು ತಲುಪಿಸಲಿದ್ದಾರೆ. ಒಂದು ವೇಳೆ ವಿದ್ಯಾರ್ಥಿಗಳಿಗೆ ವಿತರಿಸುವಾಗ ಅಳತೆಯಲ್ಲಿ (ಸೈಜ್) ವ್ಯತ್ಯಾಸ ಕಂಡುಬಂದಲ್ಲಿ, ಮುಖ್ಯ ಶಿಕ್ಷಕರು ತಕ್ಷಣವೇ ಅದನ್ನು ತಾಲೂಕು ಕಚೇರಿಗೆ ವಾಪಸ್ ಕಳುಹಿಸಿ ಸೂಕ್ತ ನಂಬರ್‌ನ ಶೂಗಳನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ವಿತರಣಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಕಡಕ್ ಎಚ್ಚರಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಮೂರೂ ಹಂತದ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಮಾರ್ಗಸೂಚಿಯನ್ನು ಇಲಾಖೆ ಪ್ರಕಟಿಸಿದೆ.

Join WhatsApp

Join Now

Join Telegram

Join Now