ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ ಆಚರಣೆ ಹಾಗೂ ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಗಾಂಧೀಜಿ ಒಬ್ಬ ವ್ಯಕ್ತಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲ, ನೈತಿಕ ಭಾರತವನ್ನು ಕಟ್ಟುವ ಶಕ್ತಿ. ನಾವು ಇಂದು ದೇಶಕ್ಕಾಗಿ ದುಡಿಯುವ ಮೂಲಕ ವಿಶ್ವದಲ್ಲಿ ಅಗ್ರ ಸ್ಥಾನ ಪಡೆಯಲು ಶ್ರಮಿಸಬೇಕು. ಇಂದಿನ ಸಮಾಜದಲ್ಲಿ ನಾವು ನಾಗರಿಕ ಜವಾಬ್ದಾರಿಯ ಕೊರತೆಯನ್ನು ಕಾಣುತ್ತೇವೆ. ಕರ್ತವ್ಯ ಪ್ರಜ್ಞೆ ಮೂಡಿಸಿಕೊಂಡು ಕೆಲಸ ಮಾಡಿದರೆ ಯಾವ ಸವಾಲೂ ದೊಡ್ಡದಲ್ಲ. ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿದರೆ, ಅದುವೇ ಗಾಂಧೀಜಿಯವರಿಗೆ ನಾವು ನೀಡುವ ಗೌರವ ಎಂದರು.

ಗಾಂಧೀಜಿಯವರು ಜನರಿಂದ ಉತ್ಪಾದನಾ ಚಟುವಟಿಕೆಗಳು ನಡೆಯಬೇಕು ಎಂದು ಬಯಸಿದ್ದರು. ದುಡಿಮೆಯಲ್ಲಿ ಆರ್ಥಿಕತೆ ಇದೆ. ದುಡ್ಡಿನಲ್ಲಿ ಅಲ್ಲ ಎಂದ ಮುಖ್ಯಮಂತ್ರಿಗಳು, ಅದಕ್ಕಾಗಿಯೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ನುಡಿದರು. ಕಾಯಕ ಪೂಜೆಗಿಂತಲೂ ಮಿಗಿಲಾದದ್ದು. ಸ್ವರ್ಗ ಸಮಾನ. ಪರಿವರ್ತನೆ ಗಾಂಧೀಜಿಯವರ ದೊಡ್ಡ ಗುಣ. ನಾವು ಇಂದು ಸುಳ್ಳನ್ನು ಉಳಿತಾಯ ಮಾಡಿ, ಸತ್ಯವನ್ನು ಖರ್ಚು ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.ಗಾಂಧೀಜಿಯವರ ಹೋರಾಟಕ್ಕೆ ತಾತ್ವಿಕ, ಸೈದ್ಧಾಂತಿಕ ಹಾಗೂ ವೈಜ್ಞಾನಿಕ ಹಿನ್ನಲೆಯಿದೆ. ಪ್ರತಿಯೊಬ್ಬರೂ ಬದ್ಧತೆಯೊಂದಿಗೆ ಕೆಲಸ ಮಾಡಿದಾಗ ಸಾರ್ಥಕತೆ ಮೂಡುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಪ್ರಗತಿಯಲ್ಲಿದೆ. ದಾವಣಗೆರೆಯ ಗಾಂಧೀ ಭವನ ಇತ್ತೀಚೆಗೆ ಉದ್ಘಾಟನೆಯಾಗಿದ್ದು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಉದ್ಘಾಟನೆಗೆ ಸಜ್ಜುಗೊಂಡಿವೆ. ಉಳಿದ ಜಿಲ್ಲೆಗಳ ಗಾಂಧಿ ಭವನಗಳೂ ಶೀಘ್ರವೇ ಸಿದ್ಧವಾಗಲಿವೆ ಎಂದರು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago