in

ಬಡ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ಮುಟ್ಟಿಸಿದಾಗ ಮಾತ್ರ ಸರ್ಕಾರದ ಕಾರ್ಯಕ್ರಮಗಳು ಸಫಲವಾಗುತ್ತವೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

suddione whatsapp group join

ಚಿತ್ರದುರ್ಗ, (ಏ.26): ಸರ್ಕಾರದ ಯೋಜನೆಗಳು ಸಫಲವಾಗಬೇಕಾದರೆ ಅಧಿಕಾರಿಗಳು ಮನೆ ಮನೆಗೆ ಹೋಗಿ ಹುಡುಕಿ ಬಡ ಫಲಾನುಭವಿಗಳಿಗೆ ಮುಟ್ಟಿಸಿದಾಗ ಮಾತ್ರ ಸರ್ಕಾರದ ಕಾರ್ಯಕ್ರಮಗಳು ಸಫಲವಾಗುತ್ತವೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.

ಕಂದಾಯ ಇಲಾಖೆ ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಮಂಗಳವಾರ ಏರ್ಪಡಿಸಲಾಗಿದ್ದ ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಮಟ್ಟದ ವಿವಿಧ ಸವಲತ್ತುಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಹಳ್ಳಿಗಾಡಿನಲ್ಲಿ ಅನೇಕರಿಗೆ ಇನ್ನು ಸರ್ಕಾರದ ಯೋಜನೆಗಳು ಸರಿಯಾಗಿ ತಲುಪಿಲ್ಲ. ವಯಸ್ಸಾದವರು, ವಿಧವೆಯರು, ನಾನಾ ಕಾರಣಗಳಿಂದ ಕಾಯಿಲೆಯಿಂದ ಬಳುತ್ತಿರುವವರಿಗೆ ಮುಪ್ಪಿನ ಕಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗಬಾರದೆನ್ನುವ ಉದ್ದೇಶದಿಂದ ಹಳ್ಳಿಗಾಡಿನಲ್ಲಿ ಪ್ರತಿ ಮನೆ ಮನೆಗೆ ಹೋಗಿ ಬಡವರನ್ನು ಹುಡುಕಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸದ್ದರ ಫಲವಾಗಿ 700 ಆದೇಶ ಪತ್ರಗಳನ್ನು ವಿತರಿಸುತ್ತಿದ್ದೇವೆ.

ಇದು ನನಗೆ ಅತ್ಯಂತ ಸಂತೋಷವನ್ನುಂಟು ಮಾಡಿದೆ. ಇದರಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಶ್ರಮವಿದೆ. ಎರಡು ವರ್ಷಗಳಿಂದ ಕೊರೋನಾದಲ್ಲಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದ್ದು, ಬಡವರು ಯಾರು ಹಸಿವಿನಿಂದ ನರಳಬಾರದೆಂದು ದೇಶದ ಪ್ರಧಾನಿ ನರೇಂದ್ರಮೋದಿರವರು ಭಾರತದಲ್ಲಿ ಎಂಬತ್ತು ಕೋಟಿ ಜನರಿಗೆ ಉಚಿತವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಧಾನ್ಯಗಳನ್ನು ನೀಡಿದ್ದಾರೆ.

ಜಗತ್ತಿನಲ್ಲಿ ಬೇರೆ ಯಾವ ದೇಶದವರು ಬಡವರಿಗೆ ಈ ರೀತಿಯ ಸವಲತ್ತುಗಳನ್ನು ಕೊಟ್ಟಿಲ್ಲ. ಬಡವರು ಇದರ ಪ್ರಯೋಜನ ಪಡೆದುಕೊಂಡು ನೆಮ್ಮದಿಯಾಗಿ ಜೀವಿಸುವಂತೆ ಹೇಳಿದರು.

ಉಪವಿಭಾಗಾಧಿಕಾರಿ ಚಂದ್ರಯ್ಯ, ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ, ಉಪ ತಹಶೀಲ್ದಾರ್ ಫಾತಿಮ, ಕಂದಾಯ ನಿರೀಕ್ಷಕ ಶರಣಪ್ಪ, ಬಿಜೆಪಿ.ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಸಿದ್ದೇಶ್‍ಯಾದವ್ ಇನ್ನು ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ಅಕ್ಕಮಹಾದೇವಿ ವಚನಗಳು ಪುಸ್ತಕದಲ್ಲಿ  ಉಳಿಯದೆ ಮಸ್ತಕದಲ್ಲಿಡಬೇಕು : ಶ್ರೀಮತಿ ಸಿ ಬಿ ಶೈಲ ಜಯಕುಮಾರ್

ರೈತ ವಿರೋಧಿ ಕಾನೂನು ಹಿಂದಕ್ಕೆ ಪಡೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ