ಚಿತ್ರದುರ್ಗ, (ಏ.26): ಸರ್ಕಾರದ ಯೋಜನೆಗಳು ಸಫಲವಾಗಬೇಕಾದರೆ ಅಧಿಕಾರಿಗಳು ಮನೆ ಮನೆಗೆ ಹೋಗಿ ಹುಡುಕಿ ಬಡ ಫಲಾನುಭವಿಗಳಿಗೆ ಮುಟ್ಟಿಸಿದಾಗ ಮಾತ್ರ ಸರ್ಕಾರದ ಕಾರ್ಯಕ್ರಮಗಳು ಸಫಲವಾಗುತ್ತವೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.
ಕಂದಾಯ ಇಲಾಖೆ ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಮಂಗಳವಾರ ಏರ್ಪಡಿಸಲಾಗಿದ್ದ ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಮಟ್ಟದ ವಿವಿಧ ಸವಲತ್ತುಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಹಳ್ಳಿಗಾಡಿನಲ್ಲಿ ಅನೇಕರಿಗೆ ಇನ್ನು ಸರ್ಕಾರದ ಯೋಜನೆಗಳು ಸರಿಯಾಗಿ ತಲುಪಿಲ್ಲ. ವಯಸ್ಸಾದವರು, ವಿಧವೆಯರು, ನಾನಾ ಕಾರಣಗಳಿಂದ ಕಾಯಿಲೆಯಿಂದ ಬಳುತ್ತಿರುವವರಿಗೆ ಮುಪ್ಪಿನ ಕಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗಬಾರದೆನ್ನುವ ಉದ್ದೇಶದಿಂದ ಹಳ್ಳಿಗಾಡಿನಲ್ಲಿ ಪ್ರತಿ ಮನೆ ಮನೆಗೆ ಹೋಗಿ ಬಡವರನ್ನು ಹುಡುಕಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸದ್ದರ ಫಲವಾಗಿ 700 ಆದೇಶ ಪತ್ರಗಳನ್ನು ವಿತರಿಸುತ್ತಿದ್ದೇವೆ.
ಇದು ನನಗೆ ಅತ್ಯಂತ ಸಂತೋಷವನ್ನುಂಟು ಮಾಡಿದೆ. ಇದರಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಶ್ರಮವಿದೆ. ಎರಡು ವರ್ಷಗಳಿಂದ ಕೊರೋನಾದಲ್ಲಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದ್ದು, ಬಡವರು ಯಾರು ಹಸಿವಿನಿಂದ ನರಳಬಾರದೆಂದು ದೇಶದ ಪ್ರಧಾನಿ ನರೇಂದ್ರಮೋದಿರವರು ಭಾರತದಲ್ಲಿ ಎಂಬತ್ತು ಕೋಟಿ ಜನರಿಗೆ ಉಚಿತವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಧಾನ್ಯಗಳನ್ನು ನೀಡಿದ್ದಾರೆ.
ಜಗತ್ತಿನಲ್ಲಿ ಬೇರೆ ಯಾವ ದೇಶದವರು ಬಡವರಿಗೆ ಈ ರೀತಿಯ ಸವಲತ್ತುಗಳನ್ನು ಕೊಟ್ಟಿಲ್ಲ. ಬಡವರು ಇದರ ಪ್ರಯೋಜನ ಪಡೆದುಕೊಂಡು ನೆಮ್ಮದಿಯಾಗಿ ಜೀವಿಸುವಂತೆ ಹೇಳಿದರು.
ಉಪವಿಭಾಗಾಧಿಕಾರಿ ಚಂದ್ರಯ್ಯ, ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ, ಉಪ ತಹಶೀಲ್ದಾರ್ ಫಾತಿಮ, ಕಂದಾಯ ನಿರೀಕ್ಷಕ ಶರಣಪ್ಪ, ಬಿಜೆಪಿ.ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಸಿದ್ದೇಶ್‍ಯಾದವ್ ಇನ್ನು ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…