ಚಿತ್ರದುರ್ಗ, ಸುದ್ದಿಒನ್. (ಸೆ.29) : ಭೀಮಸಮುದ್ರ ಸಮೀಪದ ಚಿತ್ರಹಳ್ಳಿ ಗ್ರಾಮದಲ್ಲಿ ಸೆ. 30 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯನ್ನು ದತ್ತು ಸ್ವೀಕಾರ ಕಾರ್ಯಕ್ರಮ ಹಾಗೂ ಶಾಲಾ ಕೊಠಡಿ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಭೀಮಸಮುದ್ರದ ಗಜಾನನ ಅಡಿಕೆ ದಲ್ಲಾಳಿ ಮಂಡಿ ವರ್ತಕ ಜಿ.ಎಂ. ಲವಕುಮಾರ್ ತಿಳಿಸಿದ್ದಾರೆ.
ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕೆಂಬ ಉದ್ದೇಶದಿಂದ ಶಾಲೆಯನ್ನು ದತ್ತು ಪಡೆದು ಮಕ್ಕಳಿಗೆ ಬೇಕಾದ ಸಮವಸ್ತ್ರ, ಪುಸ್ತಕ ಸೇರಿದಂತೆ ಮತ್ತಿತರ ಅಗತ್ಯ ವಸ್ತುಗಳನ್ನು ನೀಡಲಾಗುತ್ತದೆ. ಉತ್ತಮ ಶಿಕ್ಷಣದಿಂದ ಸುಭದ್ರ ಸಮಾಜ ನಿರ್ಮಾಣ ಸಾಧ್ಯ ಎನ್ನುವುದರಲ್ಲಿ ನಂಬಿಕೆ ಹೊಂದಿದ್ದೇನೆ. ಸರ್ವರಿಗೂ ಶಿಕ್ಷಣ ಕಲ್ಪಿಸಬೇಕು ಎನ್ನುವ ಮಹದಾಸೆಯಿಂದ ಸರ್ಕಾರಿ ಶಾಲೆ ದತ್ತು ಸ್ವೀಕರಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಅವುಗಳನ್ನು ಅತ್ಯಾಧುನಿಕವಾಗಿ ರೂಪಿಸಿ ಮಾದರಿಯಾಗಿಸುವ ಕನಸು ಹೊಂದಿದ್ದೇನೆ’ ಎಂದು ಸುದ್ದಿಒನ್ ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ,
ಜಿ.ಎಂ. ಲವಕುಮಾರ್, ಬಿ ಇ ಓ ಶ್ರೀನಿವಾಸ್, ಸಿಆರ್‌ಪಿ ಮುರಳಿ ಕೃಷ್ಣ, ಭಾಗವಹಿಸಲಿದ್ದಾರೆ. ಗ್ರಾಮಸ್ಥರು, ಮಕ್ಕಳು ಹಾಗೂ ಪೋಷಕರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಜಿಎಂ ಲವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.