ಸುದ್ದಿಒನ್, ಹೊಳಲ್ಕೆರೆ, ಜುಲೈ. 22 : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಕೊಡುತ್ತಿದೆ. ಆದುದರಿಂದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಉತ್ತಮ ಎಂದು ಬಿಇಒ ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ಚಿತ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಕೊಠಡಿ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರ ಮತ್ತು ಶಿಕ್ಷಣ ಇಲಾಖೆ ಕರ್ನಾಟಕದಲ್ಲಿ 4134 ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮವನ್ನು ಪ್ರಾರಂಭಿಸಿದೆ. ಮುಂದಿನ ದಿನಗಳಲ್ಲಿ ಯುಕೆಜಿ ಹಾಗೂ ಎಲ್. ಕೆ.ಜಿ. ಪ್ರಾರಂಭ ಮಾಡುವ ಭರವಸೆ ಇದೆ. ಆದುದರಿಂದ ಮಕ್ಕಳನ್ನುಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು.
ಸಮಾಜಸೇವಕರಾದ ಜಿ.ಎಂ.ಲವಕುಮಾರ್ ಮಾತನಾಡಿ, ಚಿತ್ರಹಳ್ಳಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದೇನೆ. ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡುತ್ತಿದ್ದೇವೆ. ಹೊಳಲ್ಕೆರೆ ಶಾಸಕರಾದ ಡಾ. ಎಂ ಚಂದ್ರಪ್ಪನವರು ಶಾಲೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಹಾಗೆಯೇ ಇಂದು ಕೂಡ ಎರಡು ಕೊಠಡಿಗೆ 20 ಲಕ್ಷದ ರೂಗಳನ್ನು ನೀಡಿದ್ದಾರೆ. ಚಿತ್ರಹಳ್ಳಿ ಗ್ರಾಮದ ಸುತ್ತಮುತ್ತಲಿರುವ ಯಾವುದೇ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರಿ ಶಾಲೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಈ ಶಾಲೆಯನ್ನು ದತ್ತು ಪಡಿತ್ತಿದ್ದೇನೆ. ಖಾಸಗಿ ಶಾಲೆಗಳಿಗೆ ಸೇರಿಸುವುದಕ್ಕಿಂತ ನಮ್ಮ ಸರ್ಕಾರಿ ಶಾಲೆಗೆ ಸೇರಿಸಿದರೆ ಉತ್ತಮ ಶಿಕ್ಷಣ ಸಿಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ದಿವ್ಯ ಜ್ಯೋತಿ, ಮುಖ್ಯೋಪಾಧ್ಯಾಯಿನಿ ಗಾಯತ್ರಿ ಪ್ರಭಾಕರ್, ಗ್ರಾಮ ಪಂಚಾಯತಿ ಸದಸ್ಯರಾದ ಜಿ.ಎಂ. ಕಾಂತರಾಜ್,, ಮಲ್ಲಿಕಾರ್ಜುನ್, ಮಂಜುನಾಥ್, ಎಂ ಆರ್ ನಾಗರಾಜ್ ಶಿಕ್ಷಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












