ಅಧಿಕಾರಿಗಳ ದಾಳಿಯಲ್ಲಿ ಅಂಬಿಕಾಪತಿ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ 40 ಕೋಟಿ ಹಣ. ಇದೀಗ ಅಂಬಿಕಾಪತಿ ಸಾವಿನ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೀಡಿರುವ ಹೇಳಿಕೆಯನ್ನು ಸರ್ಕಾರ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು. ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು.

ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















