Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಡ ಕಲಾವಿದರಿಗೆ ಉತ್ತೇಜನ, ಪ್ರೋತ್ಸಾಹ ಕೊಡುವಲ್ಲಿ ಸರ್ಕಾರ ಸ್ಪಂದಿಸಬೇಕು : ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಚಿತ್ರದುರ್ಗ, (ಜ.02) : ಬಡ ಕಲಾವಿದರಿಗೆ ಉತ್ತೇಜನ, ಪ್ರೋತ್ಸಾಹ ಕೊಡುವಲ್ಲಿ ಸರ್ಕಾರ ಸ್ಪಂದಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಹಿತ್ಯ ಸಾಮ್ರಾಜ್ಯ ನಾಟ್ಯ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಹಯೋಗದೊಂದಿಗೆ ಕಬೀರಾನಂದಾಶ್ರಮದ ಆವರಣದಲ್ಲಿರುವ ರಂಗ ಮಂದಿರದಲ್ಲಿ ಇತ್ತೀಚೆಗೆ ನಡೆದ ಸಂಗೀತೋತ್ಸವ ಹಾಗೂ ಮಹಿಷಾಸುರ ಮರ್ಧಿನಿ ಭಕ್ತಿ ಪ್ರಧಾನ ಪೌರಾಣಿಕ ನಾಟಕ ಉದ್ಗಾಟಿಸಿ ಮಾತನಾಡಿದರು.

ಕಳೆದ ಆರು ತಿಂಗಳಿಂದ ನಿಂತಿದ್ದ ಜಿಲ್ಲೆಯ ಕಲಾವಿದರ ಮಾಶಾಸನವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ನೀಡಿರುವುದು ಕಲಾವಿದರ ಬದುಕು ಸುಧಾರಣೆಯಾದಂತಾಗಿದೆ. ಕಲಾವಿದರು ಕಷ್ಟದಲ್ಲಿರುವುದರಿಂದ ಸರ್ಕಾರದ ಜೊತೆಗೆ ಪ್ರೇಕ್ಷಕರು ಕಲಾವಿದರು ಹಾಗೂ ಸಂಗೀತಗಾರರನ್ನು ಉಳಿಸಿ ಬೆಳೆಸಬೇಕಿದೆ ಎಂದು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಜಾನಪದ ಹಾಡುಗಾರ ಡಿ.ಓ.ಮುರಾರ್ಜಿ, ಲೇಖಕ ಹೆಚ್.ಆನಂದ್‍ಕುಮಾರ್, ವಿಮಲಾಕ್ಷಿ, ತಿಪ್ಪೇರುದ್ರಣ್ಣ, ನಯನ್‍ಕುಮಾರ್, ವಿಜಯ್‍ಕುಮಾರ್, ಸಾಹಿತ್ಯ ಸಾಮ್ರಾಜ್ಯ ನಾಟ್ಯ ಸಂಘದ ಅಧ್ಯಕ್ಷೆ ಸಿ.ಕೆ.ನಳಿನ, ಟಿ.ನಾಗೇಂದ್ರ ವೇದಿಕೆಯಲ್ಲಿದ್ದರು. ಮೈಸೂರಿನ ಶಕ್ತಿ ಕನ್ನಡ ನಾಟಕ ಕಲಾ ಸಂಘದವರು ರಂಗಗೀತೆಗಳನ್ನು ಹಾಡಿದರು.

ಕೆ.ಗಂಗಾಧರ್ ಮತ್ತು ತಂಡದಿಂದ ಸುಗಮ ಸಂಗೀತ, ತುರುವನೂರಿನ ಮೈಲಾರಿ ಮತ್ತು ತಂಡದ ವಚನ ಸಂಗೀತ, ಹಿಮಂತರಾಜ ಟಿ. ಮತ್ತು ತಂಡದಿಂದ ತತ್ವಪದ ಗಾಯನ, ಜಾನಪದ ಸಂಗೀತ, ಭಕ್ತಿಗೀತೆ, ಭಾವಗೀತೆಗಳು ಪ್ರೇಕ್ಷಕರನ್ನು ರಂಜಿಸಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!