ಅನುದಾನಿತ ಶಾಲೆಗಳಿಗೂ ಸರ್ಕಾರದಿಂದ ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ

1 Min Read

 

ಶಿವಮೊಗ್ಗ: ಅನುದಾನಿತ ಶಾಲೆಗಳಿಗೂ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ಹೇಳಿದ್ದಾರೆ. ಶಿಕ್ಷಕ ವೃತ್ತಿಗೆ ಹೋಗ್ಬೇಕು ಅಂತ ಕಾಯ್ತಿರೋರಿಗೆ ಜಾಬ್ ಕಾಲ್ ಆಗಲಿದೆ. ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಅನುದಾನಿತ ಶಾಲೆಗಳಿಗೂ ಸರ್ಕಾರದಿಂದಾನೇ ಶಿಕ್ಷಕರನ್ನು ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ. ಅನುದಾನಿತ ಶಾಕೆಗಳ 6 ಸಾವಿರ ಹಾಗೂ ಸರ್ಕಾರಿ ಶಾಲೆಗಳ 12 ಸಾವಿರ ಸೇರಿದಂತೆ 18 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ಮಾಡಿದೆ. ಈ ಸಂಬಂಧ ಶೀಘ್ರವೇ ಅಧಿಸೂಚನೆ ಹೊರಡಿಸಲಾಗಿದೆ. ಅದರ ಹೊರತಾಗಿಯೂ ಅನುದಾನಿತ ಸರ್ಕಾರಿ ಶಾಲೆಗಳಲ್ಲಿ ಖಾಲಿ ಉಳಿಯುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು.

ಅನುದಾನಿತ ಶಾಲೆಗಳಿಗೆ ಬಹುಶಃ 4 ರಿಂದ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುತ್ತದೆ. ಅವರಿಗೆ ಗೌರವಧನವನ್ನು ಸರ್ಕಾರದಿಂದಾನೇ ಪಾವತಿಸಲಾಗುತ್ತದೆ. ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 1995ರ ನಂತರ 10 ವರ್ಷಗಳ ಅವಧಿಯಲ್ಲಿ ಅನುದಾನಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಸರ್ಕಾರ ನಿರ್ಧರಿಸಲಾಗಿದೆ. ಆ ಪ್ರಸ್ತಾವಕ್ಕೆ ಸಿಎಂ ಸಿದ್ದರಾಮಯ್ಯ ಅನುಮತಿ ಕೊಡುತ್ತಿದ್ದಂತೆಯೇ ಪ್ರಕ್ರಿಯೆ ಆರಂಭವಾಗುತ್ತದೆ. ಅಂಗವಿಕಲ ಮಕ್ಕಳಿಗೆ ಚಿಕಿತ್ಸೆ ಮತ್ತು ಶಿಕ್ಷಣ ಎರಡಕ್ಕೂ ಅವಕಾಶವಾಗಲೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎರಡು ವಸತಿಯು ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ. ಈ ಮೂಲಕ ಶಿಕ್ಷಕರಾಗಬೇಕೆಂಬ ಆಸೆಗೆ ದಾರಿ ಸಿಕ್ಕಂತಾಗುತ್ತದೆ.

Share This Article