ಸರ್ಕಾರಕ್ಕೆ ಅವರದ್ದೇ ಪಕ್ಷದವರು ಪಾಠ ಕಲಿಸುತ್ತಾರೆ : ಚಿತ್ರದುರ್ಗದಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ

4 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 16 : ಕಾಂತರಾಜ್ ಸಮಿತಿ ವರದಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ಧಾಗ ಬಂದ ವರದಿಯಾಗಿದೆ ಆದರೆ ಆಗ ಅವರು ಅದನ್ನು ಅನುಷ್ಠಾನ ಮಾಡಿಲ್ಲ ಇದು ಅರೆ ಬೆಂದ ವರದಿಯಾಗಿದ್ದು ಅವರೇ ಹೇಳಿ ಮಾಡಿಸಿದ ವರದಿಯಾಗಿದೆ ಎಂದು ಸಿದ್ದರಾಮಯ್ಯರವರ ವಿರುದ್ದ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಕಿಡಿ ಕಾರಿದರು.

ನಿನ್ನೆ ದಿನ ಅಧಿಕೃತವಾಗಿ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾಗಿ ಜವಬ್ದಾರಿ ವಹಿಸಿಕೊಂಡ ಬಳಿಕಾ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕಾ ಸುದ್ದಿಗಾರರೊಂದಿಗೆ ಮಾತನಾಡಿ ಕಾಂತರಾಜ್ ವರದಿಯನ್ನು ತಯಾರು ಮಾಡಲು ಕಾಂಗ್ರೆಸ್ ಸರ್ಕಾರದ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ 150 ಕೋಟಿ ಹಣವನ್ನು ನೀಡಿದ್ದರು.

ವರದಿಯನ್ನು ಅವರು ಮನಬಂದಂತೆ ತಯಾರು ಮಾಡಿ ಅರೆ ಬೆಂದ ವರದಿಯನ್ನು ತಯಾರು ಮಾಡಿದ್ದಾರೆ ಆಯೋಗದವರು ಎಷ್ಟೋ ಮನೆಗಳಿಗೆ ಬೇಟಿಯನ್ನು ನೀಡಿದೆ ಎ.ಸಿ.ರೂಂನಲ್ಲಿ ಕುಳಿತು ವರದಿಯನ್ನು ತಯಾರು ಮಾಡಿದ್ದಾರೆ. ಈ ಸಮಯದಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿದ್ದರೆ ಏಕೆ ಅನುಷ್ಠಾನ ಮಾಡಲಿಲ್ಲ ಎಂದು  ಪ್ರಶ್ನಿಸಿದರು.

ಆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ವೀರಶೈವ ಲಿಂಗಾಯತ ಮದ್ಯ ಬಿರುಕನ್ನು ತಂದು ಬೆಂಕಿಯನ್ನು ಹಚ್ಚುವ ಕೆಲಸವನ್ನು ಮಾಡಲಿಲ್ಲವೇ ಅದರಲ್ಲಿ ವಿಫಲರಾದರು, ಈಗ ಹೊಸ ರೂಪದಲ್ಲಿ ಸಮಾಜವನ್ನು ಒಡೆಯುವ ದುಸ್ಸಾಹಕ್ಕೆ ಕೈ ಹಾಕುತ್ತಿದ್ದಾರೆ. ಬರುವಂತ ದಿನಗಳಲ್ಲಿ ಎಲ್ಲದಕ್ಕೂ ಜನತೆ ಉತ್ತರವನ್ನು ನೀಡುತ್ತಾರೆ ಎಂದು ವಿಜಯೇಂದ್ರ ತಿಳಿಸಿದರು. .

ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ. ನಮ್ಮ ಪಕ್ಷವನ್ನ 40 ಪರ್ಸೆಂಟ್ ಸರ್ಕಾರ ಎಂದು ಟೀಕಿಸಿದ್ದರು. ಮತದಾರರೂ ಅದನ್ನು ನಂಬಿದರು. ಹೊಸ ಕಾಂಗ್ರೆಸ್ ಸರ್ಕಾರ ಬಂದು 6 ತಿಂಗಳಾಗಿದೆ. ಹಗಲು ದರೋಡೆ, ಭ್ರಷ್ಟಾಚಾರ ಹೆಚ್ಚಾಗಿದ್ದು ಭ್ರಷ್ಟಾಚಾರದ ಅನುಷ್ಠಾನ ಕಾಂಗ್ರೆಸ್ ಸರ್ಕಾರದಿಂದ ಆಗುತ್ತಿದೆ ಎಂದು ಆಕ್ಷೇಪಿಸಿದರು. 28ಕ್ಕೆ 28 ಕ್ಷೇತ್ರ ಗೆಲ್ಲುವ ಜೊತೆ ಜೊತೆಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೂಡ ರಾಜ್ಯವನ್ನು ಬಿಜೆಪಿ ಭದ್ರಕೋಟೆಯಾಗಿ ಮಾಡಲು ಶ್ರಮಿಸುತ್ತೇನೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದ್ದು ಈ ದುಷ್ಟ ಸರ್ಕಾರಕ್ಕೆ ಆ ಪಕ್ಷದ ಶಾಸಕರೇ ಪಾಠ ಕಲಿಸುತ್ತಾರೆ. ಹಿರಿಯರ ಮಾರ್ಗದರ್ಶನದಲ್ಲಿ, ಸಂಘ ಪರಿವಾರದ ಮಾರ್ಗದರ್ಶನದಡಿ ಬಿಜೆಪಿಗೆ ಶಕ್ತಿ ತುಂಬುತ್ತೇನೆ. ಹಾಗೂ ಹಗಲು ರಾತ್ರಿ ಪ್ರವಾಸ ಮಾಡಿ, ರೈತರು, ಬಡವರ ಪರವಾಗಿ ಧ್ವನಿ ಎತ್ತುತ್ತೇವೆ ಎಂದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ 28 ನ್ನೂ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈ ಬಲ ಪಡಿಸಿ ಹೊಸ ಇತಿಹಾಸ ಸೃಷ್ಠಿಸಬೇಕು ಎನ್ನುವುದು ನನ್ನ ಗುರಿಯಾಗಿದೆ ಹಿಂದೆ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ 20 ಕ್ಷೇತ್ರ ಗೆದ್ದಿದ್ದೇವೆ. ನಾನು ಎಲ್ಲಾ ಕ್ಷೇತ್ರ ಗೆಲ್ಲಲು ಕಾರ್ಯೋನ್ಮುಖನಾಗಿ ಕೆಲಸ ಮಾಡುವೆ. ಒಂದು ದಿನ ಕೂಡಾ ಬಿಡುವು ನೀಡದೆ ಸಂಚಾರ ಮಾಡುವೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಕೂಡಾ ಗೆಲ್ಲಬೇಕಿದ್ದು, ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆದ್ದು ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರ ಕೊಡುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಸರ್ಕಾರ 40% ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಪೂಜೆ ಮಾಡುತ್ತಿದ್ದರು. ಆದರೆ ಇಂದು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 40% ಅನುಷ್ಠಾನ ಈ ಸರ್ಕಾರ ಮಾಡುತ್ತಿದ್ದೆ. ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಐಟಿ ದಾಳಿ ಕುರಿತು ಕಾಂಗ್ರೆಸ್ ನಾಯಕರು ಸ್ವಾಗತ ಮಾಡಿಲ್ಲ. ಐಟಿ ದಾಳಿಯಲ್ಲಿ ವಶ ಆದ ಹಣ ಕಾಂಗ್ರೆಸ್ ಪಕ್ಷದ್ದು ಎಂದು ರಾಜ್ಯದ ಜನ ಚರ್ಚೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ ಅವರು, ಸರ್ಕಾರ ಬಂದ ಬಳಿಕ ಒಂದೂ ಯೋಜನೆ ಜಾರಿಯಾಗಿಲ್ಲ. ಜನರಿಗೆ ಅರೆಬರೆ ಬೆಂದ ಗ್ಯಾರಂಟಿ ಸ್ಕೀಮ್ ತುಪ್ಪ ಹಚ್ಚಿದ್ದಾರೆ ಎಂದು ಆರೋಪಿಸಿದರು.

ವರ್ಗಾವಣೆ ದಂಧೆಯಲ್ಲಿ ಕಾಂಗ್ರೇಸ್ ಸರ್ಕಾರ ಇದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಗ ಯತೀಂದ್ರ ಸಾಭೀತು ಮಾಡಿದ್ದು, ಅವರ ವಿಡಿಯೋವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಐಟಿ ದಾಳಿಯಾದ ಬಳಿಕ ಮತ್ತೊಂದು ದಾಖಲೆ ಸಿಕ್ಕಿದ್ದೆ. ಇದಕ್ಕೆಲ್ಲಾ ರಾಜ್ಯದ ಜನ ಮುಂದೆ ತಕ್ಕ ಉತ್ತರ ನೀಡುತ್ತಾರೆ ಎಂದರು.

ನಾನು ರಾಜ್ಯಾಧ್ಯಕ್ಷ ಸ್ಥಾನ ಪಡೆಯಲು ಅನೇಕ ಹಿರಿಯ ನಾಯಕರು ಕೂಡಾ ಆರ್ಶೀವಾದ ಮಾಡಿದ್ದಾರೆ. ಯತ್ನಾಳ್ ಜೀ , ಸೋಮಣ್ಣ ಅವರ ಬಗ್ಗೆ ಗೌರವ ಇದೆ. ಬರುವ ದಿನಗಳಲ್ಲಿ ಎಲ್ಲರೂ ಕೂಡಾ ನಮ್ಮ ಕೈಜೋಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಠಗಳಿಗೆ ಭೇಟಿ :

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಗುರುವಾರ ಮೊದಲ ಬಾರಿಗೆ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿ ನಾನಾ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಬಳಿಕ, ಅಲ್ಲಿಂದ ಯಾದವಾನಂದ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಅಲ್ಲಿನ ಅಲ್ಲಮಪ್ರಭು ದೇವರ ಪುತ್ತಳಿಗೆ ಪುಷ್ಪನಮನ ಸಲ್ಲಿಸಿದರು. ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಆನಂತರ ಶ್ರೀ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಯವರ ಆಶೀರ್ವಾದ ಪಡೆದರು.

Share This Article
Leave a Comment

Leave a Reply

Your email address will not be published. Required fields are marked *