Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಕಾಮಗಾರಿಗಳಿಗೆ ಸಾರಿಗೆ ಅಧಿಕಾರಿಗಳಿಂದ ತಡೆ ಬೇಡ : ಶಾಸಕ ಬಿ.ಜಿ. ಗೋವಿಂದಪ್ಪ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ, 19 : ಸರ್ಕಾರಿ ಕಾಮಗಾರಿಗಳಿಗೆ ಸಾರಿಗೆ ಅಧಿಕಾರಿಗಳಿಂದ ತಡೆ ಬೇಡ ಎಂದು ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.


ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿ, ಮರಳು, ಕಾಂಕ್ರಿಟ್ ಮತ್ತಿತರೆ ಸಾಮಗ್ರಿಗಳನ್ನು ಸಾಗಿಸುವ ಲಾರಿಗಳನ್ನು ತಡೆದು, ವಿವಿಧ ಕಾರಣಗಳನ್ನು ಒಡ್ಡಿ ಪ್ರಾದೇಶಿಕ ಸಾರಿಗೆ ಇಲಾಖೆ ಇನ್‍ಸ್ಪೆಕ್ಟರ್ ಗಳು ದಂಡ ವಿಧಿಸುವುದು ಸೇರಿದಂತೆ ಅಡೆ ತಡೆ ಮಾಡುತ್ತಿದ್ದಾರೆ.  ಈ ರೀತಿ ಮಾಡುವುದರಿಂದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಗೆ ಕುಂಠಿತವಾಗುತ್ತದೆ ಎಂದು ಆರೋಪಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳಿಸಿಂಘೆ ಅವರು, ಈ ಕುರಿತು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...