ಸುದ್ದಿಒನ್, ಬೆಂಗಳೂರು, ಮೇ 29: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ರಾಜ್ಯಪಾಲರು ಪ್ರವಾಸದಲ್ಲಿದ್ದ ಕಾರಣ, ನಿನ್ನೆ (ಮೇ 28) ನಡೆದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲರ ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದರು. ಪ್ರವಾಸದಿಂದ ಹಿಂತಿರುಗಿದ ರಾಜ್ಯಪಾಲರು ಇಂದು (ಮೇ 29) ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿಗಳ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಹಂಗಾಮಿ ಮುಖ್ಯಮಂತ್ರಿ: ರಾಜ್ಯದಲ್ಲಿ ಮುಂದಿನ ಪರ್ಯಾಯ ವ್ಯವಸ್ಥೆ (ಹೊಸ ಮುಖ್ಯಮಂತ್ರಿ ನೇಮಕ) ಆಗುವವರೆಗೂ ಸಿದ್ದರಾಮಯ್ಯ ಅವರನ್ನೇ ‘ಹಂಗಾಮಿ (Caretaker) ಮುಖ್ಯಮಂತ್ರಿ’ಯಾಗಿ ಮುಂದುವರೆಯುವಂತೆ ರಾಜ್ಯಪಾಲರು ಕೋರಿದ್ದಾರೆ ಹಂಗಾಮಿ ಅವಧಿಯಲ್ಲಿ ಮುಖ್ಯಮಂತ್ರಿಗಳು ಯಾವುದೇ ಪ್ರಮುಖ ಕಾರ್ಯಕಾರಿ ಅಥವಾ ಆಡಳಿತಾತ್ಮಕ ನಿರ್ಧಾರಗಳನ್ನು (Executive Decisions) ತೆಗೆದುಕೊಳ್ಳುವಂತಿಲ್ಲ ಎಂದು ರಾಜ್ಯಪಾಲರು ಹೊರಡಿಸಿರುವ ಅಧಿಕೃತ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಈಗ ಇಡೀ ರಾಜ್ಯಾದ್ಯಂತ ತೀವ್ರಗೊಂಡಿದೆ.











