ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ ಮೇಲೆ ಮನೆ ಬಾಗಿಲೊಗೆ ಬಂದು ಮರ್ಯಾದೆ ಕಳೆದು ಜನ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ತಂದೊಡ್ಡಿದ್ದಾರೆ. ಇದನ್ನೆಲ್ಲ ಗಮನಿಸಿದ್ದ ಸರ್ಕಾರ ಮೈಕ್ರೋ ಫೈನಾನ್ಸ್ ಕಂಪನಿಗಳ ಉಪಟಳಕ್ಕೆ ಬ್ರೇಕ್ ಹಾಕುವುದಕ್ಕೆ ಪ್ಲ್ಯಾನ್ ಮಾಡಿತ್ತು. ಅದಕ್ಕೆಂದೆ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಇದೀಗ ರಾಜ್ಯಪಾಲರಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ.
![](https://suddione.com/content/uploads/2024/10/gifmaker_me-5-1.gif)
ಸುಗ್ರಿವಾಜ್ಞೆಗೆ ಅಂಕಿತ ಹಾಕದೆ ವಾಪಾಸ್ ಕಳುಹಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಸ್ಪಷ್ಟನೆಯನ್ನು ಕೇಳಿದ್ದಾರೆ.
* ಸುಗ್ರಿವಾಜ್ಞೆಗೆ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುಧೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ.
* ಮೈಕ್ರೋ ಫೈನಾನ್ಸ್ ಅವರು ಮೂರು ಲಕ್ಷಕ್ಕಿಂತ ಅಧಿಕ ಸಾಲ ಕೊಡುವುದಿಲ್ಲ. ನೀವೇಗೆ ಐದು ಲಕ್ಷ ದಂಡ ಹಾಕುತ್ತೀರಿ.
* ಸಾಲ ಪಡೆಯುವವನ ಬಳಿ ಏನು ದಾಖಲೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದೀರಾ.ಆದರಡ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು.
* ಶಿಕ್ಷೆ ಪ್ರಮಾಣವನ್ನು ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆಯ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ ಕೊಟ್ಟವರಿಗೆ ಇದು ಎಫೆಕ್ಟ್ ಆಗಲಿದೆ.
* ಬಜೆಟ್ ಅಧಿವೇಶನದಲ್ಲಿ ಸಾಧಕ – ಬಾಧಕಗಳನ್ನು ಚರ್ಚಿಸಿ. ಈಗ ಇರುವ ಕಾನೂನುಗಳಲ್ಲಿಯೇ ಪೊಕೀಸರು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮ ಕೈಗೊಳ್ಳದೆ ಇಎಉವುದರಿಂದ ಮತ್ತೊಂದು ಕಾನೂನಿನ ಅಗತ್ಯತಡ ಕಾಣಿಸುತ್ತಿಲ್ಲ ಎಂದು ಸುಗ್ರಿವಾಜ್ಞೆಗೆ ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ.
![](https://suddione.com/content/uploads/2025/01/studio-11.webp)